ಮೊಳಕಾಲ್ಮುರು: ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಪ್ರತಿಭೆಗಳಿದ್ದು ಪ್ರೋತ್ಸಾಹದ ಕೊರತೆಯಿಂದಾಗಿ ಅನಾವರಣವಾಗುತ್ತಿಲ್ಲ ಎಂದು ಚಲನಚಿತ್ರ ನಿರ್ದೇಶಕ ಜಿ.ಶ್ರೀನಿವಾಸಮೂರ್ತಿ ತಿಳಿಸಿದರು.
ಇಲ್ಲಿನ ಗುರುಭವನದಲ್ಲಿ ಸೇಕ್ರೆಡ್ ಹಾರ್ಟ್ ಕಲಾ ಶಾಲೆ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.
ಸಂಘ, ಸಂಸ್ಥೆಗಳು ಕಲೆಯನ್ನು ಪ್ರೋತ್ಸಾಹಿಸುವ ಕುರಿತಾದ ಕಾರ್ಯಕ್ರಮಗಳನ್ನು ಹೆಚ್ಚು, ಹೆಚ್ಚು ಆಯೋಜಿಸುವ ಮೂಲಕ ಪ್ರತಿಭೆಗಳನ್ನು ಗುರುತಿಸಿ ಪ್ರೋತಾಹಿಸುವ ಕೆಲಸ ಮಾಡಬೇಕು. ಶಾಲೆಗಳಲ್ಲಿ ಇದಕ್ಕೆ ಪೂರಕ ವಾತಾವರಣ ನಿರ್ಮಾಣವಾಗಬೇಕು ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಸಿದ್ದಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಸಿದ್ದಯ್ಯನಕೋಟೆ ಮಠದ ಬಸವಲಿಂಗ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.
ಕಲಾವಿದರ ಕಲ್ಯಾಣ ವೇದಿಕೆ ಜಿಲ್ಲಾ ಕಾರ್ಯದರ್ಶಿ ಡಿ.ಒ.ಮೊರಾರ್ಜಿ, ಸಿಪಿಐ ವಸಂತ್ ವಿ. ಆಸೋದೆ, ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಜೆ.ವಸಂತ ಕುಮಾರ್, ಸಿಆರ್‌ಪಿ ಪಿ.ಮಂಜುನಾಥ್, ಸೇಕ್ರೆಡ್ ಶಾಲೆ ಮುಖ್ಯಸ್ಥ ಕೆ.ಮಂಜುನಾಥ್, ಕಾರ್ಯದರ್ಶಿ ಟಿ.ತಿರುಮಲೇಶ್, ವಕೀಲ ಮಂಜುನಾಥ ಸ್ವಾಮಿ ನಾಯಕ್, ಉಪನ್ಯಾಸಕ ಟಿ.ಎಲ್.ತಿಮ್ಮರಾಜು ಇದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.