ADVERTISEMENT

ಅಭಿವೃದ್ಧಿಗೆ ಸಹಕಾರ ಸಂಘ ಅತ್ಯಗತ್ಯ

ಗಾಯತ್ರಿ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವದಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2021, 12:59 IST
Last Updated 5 ಡಿಸೆಂಬರ್ 2021, 12:59 IST
ಚಿತ್ರದುರ್ಗದಲ್ಲಿ ಭಾನುವಾರ ನಡೆದ ಗಾಯತ್ರಿ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಕಾರ್ಯಕ್ರಮವನ್ನು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ್, ಉಪಾಧ್ಯಕ್ಷ ಬಿ.ಎನ್.ಲಕ್ಷ್ಮಿನಾರಾಯಣರಾವ್, ಎಸ್‌.ಆರ್.ಲಕ್ಷ್ಮಿಕಾಂತರೆಡ್ಡಿ, ಜೆ.ಎಂ.ಜಯಕುಮಾರ್, ಡಾ.ಕೆ.ಎಸ್.ಮುಕುಂದರಾವ್ ಇದ್ದರು.
ಚಿತ್ರದುರ್ಗದಲ್ಲಿ ಭಾನುವಾರ ನಡೆದ ಗಾಯತ್ರಿ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಕಾರ್ಯಕ್ರಮವನ್ನು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ್, ಉಪಾಧ್ಯಕ್ಷ ಬಿ.ಎನ್.ಲಕ್ಷ್ಮಿನಾರಾಯಣರಾವ್, ಎಸ್‌.ಆರ್.ಲಕ್ಷ್ಮಿಕಾಂತರೆಡ್ಡಿ, ಜೆ.ಎಂ.ಜಯಕುಮಾರ್, ಡಾ.ಕೆ.ಎಸ್.ಮುಕುಂದರಾವ್ ಇದ್ದರು.   

ಚಿತ್ರದುರ್ಗ: ಇಲ್ಲಿಯ ಸಹಕಾರ ಸಂಘಗಳನ್ನು ಅವಲೋಕಿಸಿದರೆ ಅನೇಕ ಸಂಘಗಳು ಮುಚ್ಚಿವೆ. ಕೆಲವು ಮಾತ್ರ ಉತ್ತಮ ಸ್ಥಿತಿಯಲ್ಲಿವೆ. ಅದರಲ್ಲಿ ಗಾಯತ್ರಿ ಪತ್ತಿನ ಸಹಕಾರ ಸಂಘವೂ ಒಂದು ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಭಿಪ್ರಾಯಪಟ್ಟರು.

ಇಲ್ಲಿಯ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಗಾಯತ್ರಿ ಪತ್ತಿನ ಸಹಕಾರ ಸಂಘದಿಂದ ಭಾನುವಾರ ಆಯೋಜಿಸಿದ್ದ ಸಂಘದ ‘ರಜತ ಮಹೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದ ವಿವಿಧೆಡೆ ಇರುವಂತೆ ನಗರದಲ್ಲೂ ಸಾಕಷ್ಟು ಸಹಕಾರ ಸಂಘಗಳಿವೆ. ಕೆಲವೊಂದು ಅಭಿವೃದ್ಧಿ ಹೊಂದಿದಂತೆ ಈ ಸಂಘ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದೆ. ಇದಕ್ಕೆ ಸಂಘದ ಪ್ರತಿಯೊಬ್ಬರು ಸಹಕಾರ ನೀಡುತ್ತಿರುವುದು ಕಾರಣವಾಗಿದೆ. ಜನರ ನಂಬಿಕೆ ಉಳಿಸಿಕೊಂಡು 25 ವರ್ಷ ಸಂಘ ಮುನ್ನಡೆಸುವುದು ಸುಲಭದ ಮಾತಲ್ಲ’ ಎಂದು ಹೇಳಿದರು.

ADVERTISEMENT

‘ಪ್ರೀತಿ, ವಿಶ್ವಾಸ, ನಂಬಿಕೆ ಉಳಿಸಿಕೊಂಡು ಅಭಿವೃದ್ಧಿಯತ್ತ ಸಾಗುತ್ತಿರುವ ಈ ಸಂಘದ ಒಗ್ಗಟ್ಟು ಸದಾ ಕಾಲ ಹೀಗೆ ಮುಂದುವರಿಯಲಿ. ಇನ್ನಷ್ಟು ಪ್ರಗತಿ ಸಾಧಿಸುವ ಮೂಲಕ ಅನೇಕರಿಗೆ ನೆರವು ನೀಡಲು ಮುಂದಾಗಲಿ. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಉತ್ತಮ ಕೆಲಸ ಮಾಡಲಿ’ ಎಂದು ಸಲಹೆ ನೀಡಿದರು.

‘ಇತರ ಸಮುದಾಯಗಳಲ್ಲೂ ಸಂಘಗಳಿವೆ. ಕೆಲವೊಮ್ಮೆ ಸ್ವಲ್ಪ ವ್ಯತ್ಯಾಸಗಳು ಆಗುತ್ತಲೇ ಇರುತ್ತವೆ. ಆದರೆ, ಅತಿ ಹೆಚ್ಚು ವಿದ್ಯಾವಂತರೇ ಇರುವ ಈ ಸಂಘದಲ್ಲಿ ಸಮಸ್ಯೆ ಸೃಷ್ಟಿಯಾಗಿಲ್ಲ. ಅದಕ್ಕಾಗಿ ನಿಮ್ಮನ್ನು ಆದರ್ಶವಾಗಿ ಇಟ್ಟುಕೊಂಡು ಇತರೆ ಸಂಘಗಳು ಮುನ್ನಡೆಯುತ್ತಿವೆ’ ಎಂದು ಅಭಿಪ್ರಾಯಪಟ್ಟರು.

ದಿ ಮರ್ಚೆಂಟ್ಸ್‌ ಸೌಹಾರ್ದ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಎಸ್‌.ಆರ್.ಲಕ್ಷ್ಮಿಕಾಂತರೆಡ್ಡಿ, ‘ಗಾಯತ್ರಿ ಪತ್ತಿನ ಸಹಕಾರ ಸಂಘ ನಿಜಕ್ಕೂ ಸಹಕಾರ ಕ್ಷೇತ್ರದಲ್ಲಿ ಮಾದರಿಯಾಗಿದೆ. ಇದು ಬ್ಯಾಂಕ್‌ ರೂಪದಲ್ಲಿ ದೊಡ್ಡಮಟ್ಟದಲ್ಲಿ ಬೆಳೆಯಬೇಕು. ಸಂಘದ ಪ್ರತಿಯೊಬ್ಬರು ಆರ್ಥಿಕವಾಗಿ ಸಬಲರಾಗಬೇಕು’ ಎಂದು ಆಶಿಸಿದರು.

ಇದೇ ವೇಳೆ ಸಂಘದ ರಜತ ನಾಣ್ಯ ಬಿಡುಗಡೆ ಮಾಡಲಾಯಿತು. ಗಾಯತ್ರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ್, ಉಪಾಧ್ಯಕ್ಷ ಬಿ.ಎನ್.ಲಕ್ಷ್ಮಿನಾರಾಯಣರಾವ್, ವೀರಶೈವ ಕ್ರೆಡಿಟ್‌ ಕೋ–ಆಪರೇಟಿವ್‌ ಸೊಸೈಟಿಯ ಮಾಜಿ ಅಧ್ಯಕ್ಷ ಜೆ.ಎಂ.ಜಯಕುಮಾರ್ ಇದ್ದರು.

***

ಸಹಕಾರ ಸಂಘ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಜತ ಮಹೋತ್ಸವದಂತೆ, ಸುವರ್ಣ, ಶತಮಾನೋತ್ಸವ ಆಚರಿಸಲಿ. ಒಗ್ಗಟ್ಟಿನಿಂದ ಸಂಘ ಮುನ್ನಡೆದು ಎಲ್ಲರ ಪ್ರಗತಿ ಆಗಲಿ.

ಡಾ.ಕೆ.ಎಸ್.ಮುಕುಂದರಾವ್, ಪತಂಜಲಿ ಆಸ್ಪತ್ರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.