ADVERTISEMENT

ಚಳ್ಳಕೆರೆ: ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಚಳ್ಳಕೆರೆ ತಾಲ್ಲೂಕು ಪಂಚಾಯಿತಿ: ಮತ್ತೆ ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 3:16 IST
Last Updated 6 ಅಕ್ಟೋಬರ್ 2020, 3:16 IST
ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್‌ನ ಒ.ಟಿ.ತಿಪ್ಪೇಸ್ವಾಮಿ ಹಾಗೂ ಜೆಡಿಎಸ್‌ನ ಹನುಮಕ್ಕ ಅವರನ್ನು ಅಭಿನಂದಿಸಲಾಯಿತು
ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್‌ನ ಒ.ಟಿ.ತಿಪ್ಪೇಸ್ವಾಮಿ ಹಾಗೂ ಜೆಡಿಎಸ್‌ನ ಹನುಮಕ್ಕ ಅವರನ್ನು ಅಭಿನಂದಿಸಲಾಯಿತು   

ಚಳ್ಳಕೆರೆ: ಇಲ್ಲಿನ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ನೇರಲಗುಂಟೆ ಕ್ಷೇತ್ರದ ಕಾಂಗ್ರೆಸ್‍ನ ಒ.ಟಿ.ತಿಪ್ಪೇಸ್ವಾಮಿ ಅಧ್ಯಕ್ಷರಾಗಿ ಮತ್ತು ದೊಡ್ಡಚೆಲ್ಲೂರು ಕ್ಷೇತ್ರದ ಜೆಡಿಎಸ್‍ನ ಹನುಮಕ್ಕ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಲ್ಕೂವರೆ ವರ್ಷದಿಂದಲೂ ತಾಲ್ಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಆಡಳಿತ ಇತ್ತು. ಬಾಕಿ ಉಳಿದಿರುವ ಆರು ತಿಂಗಳ ಕೊನೆ ಅವಧಿಗೂ ಮತ್ತೆ ಮೈತ್ರಿ ಆಡಳಿತ ಮುಂದುವರಿದಿದೆ.

ಕಾಂಗ್ರೆಸ್‍ನ 13 ಸದಸ್ಯರು, ಬಿಜೆಪಿಯ 9, ಜೆಡಿಎಸ್‌ನ 5, ಪಕ್ಷೇತರ ಮೂವರು ಜನ ಸೇರಿ ತಾಲ್ಲೂಕು ಪಂಚಾಯಿತಿಯ ಒಟ್ಟು 30 ಸದಸ್ಯರಲ್ಲಿ 17 ಸದಸ್ಯರು ಸಭೆಯಲ್ಲಿ ಹಾಜರಿದ್ದರು.

ADVERTISEMENT

ಕಾಂಗ್ರೆಸ್‌ನ ಇಬ್ಬರು, ಬಿಜೆಪಿಯ 8, ಜೆಡಿಎಸ್‌ನ ಒಬ್ಬರು ಹಾಗೂ ಇಬ್ಬರು ಪಕ್ಷೇತರರು ಸೇರಿ ಒಟ್ಟು 13 ಸದಸ್ಯರು ಗೈರಾಗಿದ್ದರು.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕೊನೆ ಗಳಿಗೆವರೆಗೆ ಭಾರಿ ಪೈಪೋಟಿ ನಡೆದಿತ್ತು. ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ವಶಕ್ಕೆ ಪಡೆದುಕೊಳ್ಳುವಲ್ಲಿ ಶಾಸಕರು ಯಶಸ್ವಿಯಾದರು.

ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮುರು ಕ್ಷೇತ್ರದ ಮಾಜಿ ಶಾಸಕ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಬಾಬು ಅವರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.