ADVERTISEMENT

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2021, 7:40 IST
Last Updated 22 ಮಾರ್ಚ್ 2021, 7:40 IST
ಸರಣಿ ಅಪಘಾತ
ಸರಣಿ ಅಪಘಾತ   

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್, ಟಾಟಾ ಸಫಾರಿ ಮತ್ತು ಕಾರಿನ ನಡುವೆ ಸೋಮವಾರ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಟಾಟಾ ಸಫಾರಿಯಲ್ಲಿ ಪ್ರಯಾಣಿಸುತ್ತಿದ್ದ ಹೊಸದುರ್ಗದ ನೇಮಿರಾಜ್ (58), ಅವರ ಪತ್ನಿ ನಂದಾ (53) ಹಾಗೂ ಕ್ಯಾಂಟರ್ ಚಾಲಕ ಪುಣೆಯ ರಂಗ (35) ಮೃತಪಟ್ಟವರು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಹೊಸದುರ್ಗಕ್ಕೆ ಬರುತ್ತಿದ್ದ ಟಾಟಾ ಸಫಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ADVERTISEMENT

ಬಳಿಕ ಡಿವೈಡರ್ ದಾಟಿ ಶಿರಾದತ್ತ ಸಾಗುತ್ತಿದ್ದ ಕ್ಯಾಂಟರ್‌ಗೆ ಅಪ್ಪಳಿಸಿದೆ ಎನ್ನಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.