ADVERTISEMENT

ಸೇವಾ ಮನೋಭಾವ ಮುಖ್ಯ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2020, 13:18 IST
Last Updated 9 ಫೆಬ್ರುವರಿ 2020, 13:18 IST
ಚಿತ್ರದುರ್ಗದಲ್ಲಿ ಭಾನುವಾರ ನಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಳೇ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ಬಿಇಒ ಎಚ್. ಶ್ರೀನಿವಾಸ್ ಉದ್ಘಾಟಿಸಿದರು.
ಚಿತ್ರದುರ್ಗದಲ್ಲಿ ಭಾನುವಾರ ನಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಳೇ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ಬಿಇಒ ಎಚ್. ಶ್ರೀನಿವಾಸ್ ಉದ್ಘಾಟಿಸಿದರು.   

ಚಿತ್ರದುರ್ಗ: ‘ಕೆಲಸ ಮಾಡುವ ಕ್ಷೇತ್ರದಲ್ಲಿ ವೃತ್ತಿಪರತೆ ಜತೆಗೆ ಸೇವಾ ಮನೋಭಾವ ಅಳವಡಿಸಿಕೊಂಡರೆ ಮಾತ್ರ ಸಮಾಜಕ್ಕೆ ಕೊಡುಗೆ ನೀಡಲು ಸಾಧ್ಯ’ ಎಂದು ಉಪ ಪ್ರಾಂಶುಪಾಲ ಎಸ್. ಸುರೇಂದ್ರನಾಥ್ ಹೇಳಿದರು.

ತರಾಸು ರಂಗಮಂದಿರದಲ್ಲಿ ಭಾನುವಾರ ನಡೆದ ಮಾರಗಟ್ಟ, ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಳೇ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವೇತನಕ್ಕಾಗಿ ಕೆಲಸ ಮಾಡುವ ಪ್ರಕ್ರಿಯೆ ಎಂದಿಗೂ ವೃತ್ತಿ ಎನಿಸಿಕೊಳ್ಳುವುದಿಲ್ಲ. ಸಾಮಾಜಿಕ ಕಳಕಳಿ ಹೊಂದಿ ಬದ್ಧತೆ, ಪ್ರಾಮಾಣಿಕತೆಯಿಂದ ದುಡಿದಾಗ ಮಾತ್ರ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ಸಲಹೆ ನೀಡಿದರು.

ADVERTISEMENT

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿನೇಶ್, ‘ಗುರು-ಶಿಷ್ಯರ ನಡುವಿನ ಸಂಬಂಧ ಅವಿಸ್ಮರಣೀಯವಾದುದು. ವಿದ್ಯೆ ಕಲಿಸಿದ ಗುರುವಿನ ಮಾರ್ಗದರ್ಶನದೊಂದಿಗೆ ಆತ್ಮವಿಶ್ವಾಸದಿಂದ ಮುನ್ನಡೆದರೆ, ಸುಂದರ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ಹಾವೇರಿ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶ್ರೀನಿವಾಸ್, ಹೊಳಲ್ಕೆರೆ ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ರಾಜಪ್ಪ, ಹಿಂದಿ ಭಾಷೆಯ ನೋಡಲ್ ಅಧಿಕಾರಿ ಎಸ್.ಬಿ. ಮಹಾಲಿಂಗಪ್ಪ, ವಿಸ್ತರಣಾಧಿಕಾರಿ ಎನ್.ಆರ್. ಶೇಖರ್, ಶಿಕ್ಷಕರಾದ ಮೇನಕಾ, ವಿಮಲಾ, ನಾಗರಾಜ, ಪ್ರಶಾಂತ, ರಾಜೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.