ಮೊಳಕಾಲ್ಮುರು: ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸು ಮಾಡುವುದು ಸೇವಾ ಯೋಜನಾ ಶಿಬಿರಗಳ ಮೂಲ ಗುರಿಯಾಗಲಿ ಎಂದು ರಾಜ್ಯ ದ್ರಾಕ್ಷಾರಸ ಹಾಗೂ ವೈನ್ ಬೋರ್ಡ್ ಅಧ್ಯಕ್ಷ ಬಿ. ಯೋಗೇಶ್‌ಬಾಬು ತಿಳಿಸಿದರು.
ತಾಲ್ಲೂಕಿನ ಸಿದ್ದಯ್ಯನಕೋಟೆಯಲ್ಲಿ ಸರ್ಕಾರಿ ಪದವಿ ಕಾಲೇಜು ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಸಮಾರೋಪ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಮಗಳ ರಸ್ತೆ, ಚರಂಡಿ, ಆವರಣಗಳನ್ನು ಸ್ವಚ್ಛ ಮಾಡುವ ಜತೆಗೆ ಜನರಲ್ಲಿರುವ ಮೂಢನಂಬಿಕೆಗಳನ್ನು ಹೋಗಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಸೂಕ್ತ. ಆಗ ಶಿಬಿರಕ್ಕೆ ಮಹತ್ವ ಬರುತ್ತದೆ. ಯೋಜನಾಧಿಕಾರಿಗಳು ಈ ಬಗ್ಗೆ ಕಾರ್ಯಕ್ರಮ ರೂಪಿಸಬೇಕು ಎಂದು ಸಲಹೆ ನೀಡಿದರು.
ವಿಜಯ ಮಹಾಂತೇಶ್ವರ ಮಠದ ಬಸವಲಿಂಗ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಪ್ರಾಂಶುಪಾಲ ಡಿ.ಸೂರಯ್ಯ, ಮಠದ ಕಾರ್ಯದರ್ಶಿ ಪಿ.ಆರ್.ಕಾಂತರಾಜ್, ಯೋಜನಾಧಿಕಾರಿ ಲಿಂಗೇಶ್ವರ್, ಸಂಗೀತ ಶಿಕ್ಷಕ ಕೆ.ಒ.ಶಿವಣ್ಣ, ಸಿಬ್ಬಂದಿ ಪಾಪಣ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.