ಹೊಳಲ್ಕೆರೆ: ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿ ಅನಾಥ ಸೇವಾಶ್ರಮದ ಆಡಳಿತ ಮಂಡಳಿ ಹಾಗೂ ಟ್ರಸ್ಟಿಗಳ ವಿರುದ್ಧ ನಡೆಯುತ್ತಿರುವ ಮುಷ್ಕರ 7ನೇ ದಿನಕ್ಕೆ ಕಾಲಿಟ್ಟಿದೆ.
‘ನಮ್ಮ ಬೇಡಿಕೆ ಈಡೇರುವವರೆಗೆ ಮುಷ್ಕರ ಕೈಬಿಡುವುದಿಲ್ಲ. ಆಶ್ರಮದಿಂದ ಚಿತ್ರದುರ್ಗದವರೆಗೆ ಪಾದಯಾತ್ರೆ ನಡೆಸಲಾಗುವುದು. ಆಶ್ರಮಕ್ಕೆ ಜಮೀನು ದಾನ ಕೊಟ್ಟವರೂ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಹಿಂದೆ ವೈಭವಯುತವಾಗಿದ್ದ ಆಶ್ರಮ ಈಗ ಹಾಳು ಕೊಂಪೆಯಾಗಿದೆ. ಹಣ ಬಂದರೂ ಅಭಿವೃದ್ಧಿ ಕಾಣುತ್ತಿಲ್ಲ. ವಿದ್ಯಾರ್ಥಿಗಳ ಸಂಖ್ಯೆಯೂ ಕುಸಿದಿದ್ದು, ಕೆಲವು ಶಾಲೆ, ಕಾಲೇಜುಗಳು ಮುಚ್ಚುವ ಹಂತಕ್ಕೆ ಬಂದಿವೆ. ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಸಿಲ್ಲ’ ಎಂದು ದುಮ್ಮಿ ಗೊಲ್ಲರಹಟ್ಟಿ ಎ.ಚಿತ್ತಪ್ಪ ಆಕ್ರೋಶ ವ್ಯಕ್ತಪಡಿಸಿದರು.
ರೈತಮುಖಂಡ ಸಂತೋಷ್, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.