ಹಿರಿಯೂರು: ತಾಲ್ಲೂಕಿನ ವಾಣಿವಿಲಾಸಪುರ ಗ್ರಾಮದ ಸಮೀಪದ ಕಕ್ಕಯ್ಯನಹಟ್ಟಿ ಗ್ರಾಮದಲ್ಲಿ ಶನಿವಾರ ಸಂಜೆ ಚಿರತೆ ದಾಳಿಯಿಂದ ಕುರಿಯೊಂದು ಸಾವನ್ನಪ್ಪಿದ್ದು, ಸುತ್ತಮುತ್ತಲ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಕುರಿಗಾಹಿ ತಿಪ್ಪೇಸ್ವಾಮಿ ಅವರು ಕುರಿಗಳನ್ನು ಮೇಯಿಸುತ್ತಿದ್ದ ಸಮಯದಲ್ಲಿ ಕುರಿಯೊಂದರ ಮೇಲೆ ಚಿರತೆ ದಾಳಿ ಮಾಡಿದೆ. ತಿಪ್ಪೇಸ್ವಾಮಿ ಜೋರಾಗಿ ಚೀರಿಕೊಂಡಿದ್ದರಿಂದ ಚಿರತೆಯು ಕುರಿಯನ್ನು ಬಿಟ್ಟು ಓಡಿ ಹೋಗಿದೆ.
ಘಟನೆಯಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ರಾತ್ರಿ ವೇಳೆ ತೋಟದ ಬೆಳೆಗಳಿಗೆ ನೀರು ಹಾಯಿಸಲು ತೆರಳಲು ಭಯವಾಗುತ್ತಿದೆ ಎಂದು ವಾಣಿವಿಲಾಸಪುರದ ಎಸ್.ಎಸ್. ರಂಗಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.