ADVERTISEMENT

ಮುರುಘಾ ಮಠದ ಆವರಣದಿಂದ ವಿದ್ಯಾರ್ಥಿನಿಯರ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2022, 12:19 IST
Last Updated 31 ಆಗಸ್ಟ್ 2022, 12:19 IST
   

ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರ ಮೇಲೆ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿನ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರನ್ನು ಬುಧವಾರ ಸಂಜೆ ತಾಲ್ಲೂಕಿನ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಸ್ಥಳಾಂತರಿಸಲಾಯಿತು.

ಪ್ರಕರಣ ಸಂಬಂಧ ಕಳೆದೆರಡು ದಿನಗಳಿಂದ ಮಠ ಹಾಗೂ ವಿದ್ಯಾರ್ಥಿನಿಲಯದಲ್ಲಿ ತನಿಖಾ ತಂಡ ಸ್ಥಳ ಮಹಜರು ನಡೆಸುತ್ತಿದೆ. ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳ ತಂಡ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಇಲಾಖೆ ವಾಹನದಲ್ಲಿ ಸ್ಥಳಾಂತರಿಸಿದರು.

ಪ್ರಕರಣದ ಸುದ್ದಿ ಹೊರ ಬೀಳುತ್ತಿದ್ದಂತೆ ಅನೇಕ ಪಾಲಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ನಿಲಯಕ್ಕೆ ಭೇಟಿ ನೀಡಿದ್ದ ರಾಜ್ಯ ಮಕ್ಕಳ ಆಯೋಗದ ಮಕ್ಕಳ ಆಯೋಗದ ಹಂಗಾಮಿ ಅಧ್ಯಕ್ಷೆ ಜಯಶ್ರೀ ಬಳಿ ವಿದ್ಯಾರ್ಥಿ‌ನಿಯರು ಆತಂಕ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.