ADVERTISEMENT

ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 21:23 IST
Last Updated 27 ಸೆಪ್ಟೆಂಬರ್ 2022, 21:23 IST
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು   

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹಾಗೂ ಹಾಸ್ಟೆಲ್‌ನ ಮಹಿಳಾ ವಾರ್ಡನ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್‌ 10ರವರೆಗೆ ವಿಸ್ತರಿಸಲಾಗಿದೆ.

ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿದ್ದರಿಂದ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಆರೋಪಿಗಳನ್ನು ಮಂಗಳವಾರ ಹಾಜರುಪಡಿಸಲಾಯಿತು. ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಆದೇಶಿಸಿದರು.

ಇಬ್ಬರು ಆರೋಪಿಗಳನ್ನು ಸೆ.1ರಂದು ಬಂಧಿಸಲಾಗಿತ್ತು. ಶಿವಮೂರ್ತಿ ಮುರುಘಾ ಶರಣರನ್ನು ಜಿಲ್ಲಾ ಕಾರಾಗೃಹದಲ್ಲಿ ಹಾಗೂ ಮಹಿಳಾ ವಾರ್ಡನ್‌ ಅವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಬಾಲಕ ಸೇರಿ ಇನ್ನೂ ಮೂವರನ್ನು ತನಿಖಾ ತಂಡ ಪತ್ತೆ ಮಾಡಬೇಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.