ADVERTISEMENT

ಹಿರಿಯರಿಗೆ ಪ್ರೀತಿ ತೋರಿಸುವುದು ಮೂಲಭೂತ ಕರ್ತವ್ಯ

ಜಾಗೃತಿ ಕಾರ್ಯಕ್ರಮ; ಹಿರಿಯ ನ್ಯಾಯಾಧೀಶರಾದ ಎಂ.ವಿಜಯ್‌ ಅಭಿಮತ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 7:59 IST
Last Updated 18 ನವೆಂಬರ್ 2025, 7:59 IST
ಎಸ್.ಜೆ.ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆ 2007ರ ಅರಿವು ಕಾರ್ಯಕ್ರಮವನ್ನು ಹಿರಿಯ ನ್ಯಾಯಾಧೀಶ ಎಂ.ವಿಜಯ್‌ ಉದ್ಘಾಟಿಸಿದರು
ಎಸ್.ಜೆ.ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆ 2007ರ ಅರಿವು ಕಾರ್ಯಕ್ರಮವನ್ನು ಹಿರಿಯ ನ್ಯಾಯಾಧೀಶ ಎಂ.ವಿಜಯ್‌ ಉದ್ಘಾಟಿಸಿದರು   

ಚಿತ್ರದುರ್ಗ: ‘ತಂದೆ, ತಾಯಿ ಮತ್ತು ಹಿರಿಯರನ್ನು ಗೌರವ, ಪ್ರೀತಿ, ವಾತ್ಸಲ್ಯ, ಸಹನೆ, ತಾಳ್ಮೆಯಿಂದ ನೋಡಿಕೊಳ್ಳುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತದ ವತಿಯಿಂದ ಸೋಮವಾರ ನಗರದ ಎಸ್.ಜೆ.ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆ 2007ರ ಕುರಿತಾದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ತಂದೆ ತಾಯಿ ಮತ್ತು ಕುಟುಂಬದ ಹಿರಿಯರು ಎಲ್ಲಾ ಸೇರಿ ಕಿರಿಯರ ಬಾಳಿನ ಜೀವನದ ಏಳಿಗೆಗೆ, ಶ್ರಯೋಭಿವೃದ್ಧಿಗೆ, ಉದ್ಧಾರಕ್ಕಾಗಿ ಹಗಲಿರುಳು ಎನ್ನದೆ ಶ್ರಮಿಸಿರುತ್ತಾರೆ. ಇವರನ್ನು ಪ್ರೀತಿಯಿಂದ ನೋಡಿಕೊಳ್ಳುವುದು, ಗೌರವಿಸುವುದು  ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿದು ಉತ್ತಮ ಸಮಾಜ ನಿರ್ಮಾಣ ಮತ್ತು ಸಮಾಜವನ್ನು ಕಾಪಾಡುವಲ್ಲಿ ಹಿರಿಯರ ಪಾತ್ರ ಬೆಟ್ಟದಷ್ಟಿದೆ’ ಎಂದರು.

ADVERTISEMENT

‘ಇತ್ತಿಚೀನ ಕಾಲಘಟ್ಟದಲ್ಲಿ ಹಿರಿಯರ ಯೋಗಕ್ಷೇಮ, ಸುಖ–ದುಖಃಗಳನ್ನು ವಿಚಾರಿಸುವಲ್ಲಿ ಕಿರಿಯರು ಹಿಂದುಳಿದಿದ್ದಾರೆ. ವಿದ್ಯಾಭ್ಯಾಸ, ಸಂಸ್ಕಾರ, ಹಣ ಅಂತಸ್ತು, ಆಸ್ತಿ–ಪಾಸ್ತಿ ಹಾಗೂ ತನ್ನ ಏಳಿಗೆಗೆ ಬೇಕಾದ ಎಲ್ಲವನ್ನು ಹಿರಿಯರಿಂದ ಪಡೆದು ಅವರನ್ನು ವೃದ್ಧಾಶ್ರಮಕ್ಕೆ ಕಳುಹಿಸುತ್ತಿರುವುದು ಅಪಾಯಕಾರಿ’.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್. ವಿಜಯಕುಮಾರ್ ಬೇಸರ ವ್ಯಕ್ತಪಡಿಸಿದರು

ಜಿಲ್ಲಾ ವಿಕಲಚೇತನನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲ್ಯಾಣಾಧಿಕಾರಿ ಜೆ. ವೈಶಾಲಿ, ಕೇಂದ್ರ ಸರ್ಕಾರ ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆ ಜಾರಿಗೆ ತಂದು ಹಿರಿಯರ ನಾಗರಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಹರಿಸಲು ಪ್ರಯತ್ನಿಸುತ್ತಿದೆ. ಕರ್ನಾಟಕ ಸರ್ಕಾರ ಹಿರಿಯ ನಾಗರಿಕರಿಗೆ ಸಂರಕ್ಷಣಾ ನೀತಿ ಜಾರಿಗೆ ತಂದಿದೆ. ಹಿರಿಯ ನಾಗರಿಕರು ಸಹಾಯವಾಣಿ ಸಂಖ್ಯೆ 1090 ಕರೆ ಮಾಡುವ ಮೂಲಕ ಸಮಸ್ಯೆಗಳಿಗೆ ಪರಿಹಾರದ ಹಾದಿಯನ್ನು ಕಾಣಬಹುದು’ ಎಂದರು.

ನಿವೃತ್ತ ಪ್ರಾಂಶುಪಾಲ ಜಿ.ಎನ್. ಮಲ್ಲಿಕಾರ್ಜುನಪ್ಪ, ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಪ್ರಾಂಶುಪಾಲ ಎಲ್. ಈಶ್ವರಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್ .ಮಹೇಶ್ವರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ. ಪ್ರೇಮನಾಥ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.