
ಸಿರಿಗೆರೆ: ಹೋಬಳಿ ಕೇಂದ್ರವಾದ ಭರಮಸಾಗರದಲ್ಲಿ ಸೋಮವಾರ ಪೊಲೀಸರು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ನಡೆಸಿದರು.
ಪೊಲೀಸ್ ಇನ್‌ಸ್ಪೆಕ್ಟರ್ ಪ್ರಸಾದ್ ನೇತೃತ್ವದ ತಂಡ ಭರಮಸಾಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಾಗರಿಕರನ್ನು ಜಾಗೃತಿಗೊಳಿಸಿದರು. ಅಪಘಾತಗಳನ್ನು ತಡೆಯಲು ಹಲವು ಸುರಕ್ಷತಾ ಕ್ರಮಗಳನ್ನು ಎಲ್ಲರೂ ಪಾಲಿಸಬೇಕು. ದ್ವಿಚಕ್ರ ವಾಹನ ಚಾಲಕರು ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮೋಟಾರು ವಾಹನ ಕಾಯ್ದೆಯಡಿ ವಿಧಿಸಲ್ಪಡುವ ದಂಡದ ವಿವರಗಳನ್ನೂ ಚಾಲಕರಿಗೆ ಹಂಚಲಾಯಿತು.
ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ವ್ಯಾಪಾರಸ್ಥರು ಮತ್ತು ವಾಹನ ಸವಾರರು ನಿಯಮ ಪಾಲನೆಗೆ ಒಲವು ತೋರಿದರು. ರಸ್ತೆ ಅಪಘಾತಗಳ ತಡೆಗೆ ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.