
ಸಿರಿಗೆರೆ: ಸಮೀಪದ ಲಕ್ಷ್ಮೀಸಾಗರ ಗ್ರಾಮದ ಜಮೀನಿನಲ್ಲಿ ಶನಿವಾರ ಮಧ್ಯರಾತ್ರಿ ಮೆಕ್ಕೆಜೋಳದ ರಾಶಿಗೆ ಬೆಂಕಿ ಬಿದ್ದಿದ್ದು, 22 ಲೋಡ್ ಮೆಕ್ಕೆಜೋಳದ ತೆನೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಗ್ರಾಮದ ರೈತ ಧನಂಜಯಪ್ಪ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿ ಬೆಂಕಿಗೆ ಆಹುತಿಯಾಗಿದೆ.
ಅಡಿಕೆ ತೋಟಕ್ಕೆ ನೀರು ಹಾಯಿಸಲು ಹೋಗುವ ಗ್ರಾಮಸ್ಥರು ಬೆಂಕಿಯನ್ನು ನೋಡಿ ಕೂಡಲೇ ರೈತನಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರ ಸಹಾಯದಿಂದ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಆದರೆ, ಅಷ್ಟೊತ್ತಿಗೆ ಮೆಕ್ಕೆಜೋಳ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಅಂದಾಜು ₹ 4 ರಿಂದ ₹ 5 ಲಕ್ಷ ನಷ್ಟವಾಗಿದ್ದು, ರೈತ ಆತಂಕಕ್ಕೆ ಒಳಗಾಗಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ.
ಭಾನುವಾರ ಬೆಳಿಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ತಾಲ್ಲೂಕು ಕಚೇರಿಯ ಅಧಿಕಾರಿಗಳು ಹಾಗೂ ಭರಮಸಾಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.