ADVERTISEMENT

ಸಿರಿಗೆರೆ ಮಠದ ಘನತೆ ಹೆಚ್ಚಿಸಿದ ಮಲಿಕಾರ್ಜುನ ಶ್ರೀ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 6:51 IST
Last Updated 16 ಫೆಬ್ರುವರಿ 2026, 6:51 IST
ಹೊಸದುರ್ಗದ ಸಾಣೇಹಳ್ಳಿಯ ಗುರುಬಸವ ಮಹಾಮನೆಯಲ್ಲಿ ಭಾನುವಾರ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳ ಶ್ರದ್ಧಾಂಜಲಿ ಸಮಾರಂಭ ನಡೆಯಿತು
ಹೊಸದುರ್ಗದ ಸಾಣೇಹಳ್ಳಿಯ ಗುರುಬಸವ ಮಹಾಮನೆಯಲ್ಲಿ ಭಾನುವಾರ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳ ಶ್ರದ್ಧಾಂಜಲಿ ಸಮಾರಂಭ ನಡೆಯಿತು   

ಹೊಸದುರ್ಗ: ಸಿರಿಗೆರೆ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಠ ಹಾಗೂ ಸಮಾಜದ ಘನತೆ ಹೆಚ್ಚಿಸಿದವರು ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸ್ಮರಿಸಿದರು.

ತಾಲ್ಲೂಕಿನ ಸಾಣೇಹಳ್ಳಿಯ ಗುರುಬಸವ ಮಹಾಮನೆಯಲ್ಲಿ ಭಾನುವಾರ ಆಯೋಜಿಸಿದ್ದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳ 18ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮಲಿಕಾರ್ಜುನ ಶ್ರೀಗಳು ಅಪ್ಪಟ ಕೃಷಿಕರಾಗಿದ್ದರು. ಒಣ ಬೇಸಾಯಗಾರರನ್ನು ತೋಟಗಾರಿಕೆ ಬೆಳೆಗಾರರನ್ನಾಗಿ ಮಾಡುವಂತೆ ಪ್ರೇರೇಪಿಸಿದವರು. ಇಷ್ಟಲಿಂಗ ಪೂಜೆ ಮಾಡುವುದರ ಜೊತೆಗೆ ಲಕ್ಷಾಂತರ ಜನರಿಗೆ ಇಷ್ಟಲಿಂಗ ದೀಕ್ಷೆ ನೀಡಿ ಲಿಂಗವಂತ ಧರ್ಮ ಪಾಲಿಸುವಂತೆ ಮಾಡಿದ ಆಧ್ಯಾತ್ಮ ಗುರುಗಳಾಗಿದ್ದರು ಎಂದು ತಿಳಿಸಿದರು.

ADVERTISEMENT

ಸಾಧು ವೀರಶೈವ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಸಿದ್ದಪ್ಪ, ಸ್ಥಳೀಯ ಸಲಹಾ ಸಮಿತಿ ಉಪಾಧ್ಯಕ್ಷ ಎಸ್.ಆರ್. ಚಂದ್ರಶೇಖರಯ್ಯ, ಮುಖ್ಯೋಪಾಧ್ಯಾಯ ಶಿವಕುಮಾರ್ ಬಿ.ಎಸ್ ಸೇರಿದಂತೆ ಗ್ರಾಮಸ್ಥರು ಹಾಗೂ ಶ್ರೀಮಠದ ಭಕ್ತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.