ADVERTISEMENT

ಸಿರಿಗೆರೆ: ಹಾವು ಕಚ್ಚಿ ರೈತ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 31 ಮೇ 2024, 13:48 IST
Last Updated 31 ಮೇ 2024, 13:48 IST
ಜಯಲಕ್ಷ್ಮಿ
ಜಯಲಕ್ಷ್ಮಿ   

ಸಿರಿಗೆರೆ: ಸಮೀಪದ ಓಬಳಾಪುರ ಗ್ರಾಮದಲ್ಲಿ ಶುಕ್ರವಾರ ಹಾವು ಕಚ್ಚಿ ರೈತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 

ಜಯಲಕ್ಷ್ಮಿ (55) ಮೃತಪಟ್ಟವರು. ಮನೆಯ ಪಕ್ಕದಲ್ಲಿಯೇ ಇದ್ದ ಬಣವೆಯಿಂದ ಜಾನುವಾರಿಗೆ ಮೇವು ಹಾಕುಲು ಹೋದಾಗ ಬಣವೆಯಲ್ಲಿ ಅವಿತುಕೊಂಡಿದ್ದ ನಾಗರಹಾವು ಕಚ್ಚಿದೆ. ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಬಳಿಕ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಭರಮಸಾಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT