ADVERTISEMENT

ಸಮೀಕ್ಷೆಗೆ ಗೈರಾಗುವ ಸಿಬ್ಬಂದಿ ವಿರುದ್ಧ ಕ್ರಮ; ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 5:57 IST
Last Updated 28 ಸೆಪ್ಟೆಂಬರ್ 2025, 5:57 IST
ಟಿ.ವೆಂಕಟೇಶ್‌
ಟಿ.ವೆಂಕಟೇಶ್‌   

ಚಿತ್ರದುರ್ಗ: ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಶಿಸ್ತಿನಿಂದ ಸಮೀಕ್ಷೆ ನಡೆಸಬೇಕು. ಕರ್ತವ್ಯಕ್ಕೆ ಗೈರಾಗುವ ಸಮೀಕ್ಷಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಎಚ್ಚರಿಸಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವು ಸರ್ಕಾರಿ ಕೆಲಸವಾಗಿದ್ದು, ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಈ ಕುರಿತಂತೆ ಸಮೀಕ್ಷೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಮೀಕ್ಷಕರು, ಮೇಲ್ವಿಚಾರಕರು ಸೇರಿದಂತೆ ಎಲ್ಲಾ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಆದರೆ ಕೆಲವು ಸಮೀಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಗೈರಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ ಎಂದರು. 

ಶಿಕ್ಷಕರು ತಮಗೆ ವಹಿಸಿರುವ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ನಿರ್ಲಕ್ಷ್ಯ ತೋರಿದರೆ ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ. ನಿರ್ಲಕ್ಷ್ಯ ತೋರುವ ಸಿಬ್ಬಂದಿ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ADVERTISEMENT

ಸಮೀಕ್ಷಕರು ಕರ್ತವ್ಯ ಮತ್ತು ಗುರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವತ್ತ ಗಮನ ಕೇಂದ್ರೀಕರಿಸಬೇಕು ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.