ADVERTISEMENT

ಬೀದಿಬದಿ ವ್ಯಾಪಾರಿಗಳಿಗೆ ತೊಂದರೆ ಕೊಟ್ಟರೆ ಹೋರಾಟ: ಕೆ. ರಾಮಚಂದ್ರ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2025, 6:39 IST
Last Updated 27 ಅಕ್ಟೋಬರ್ 2025, 6:39 IST
ಹಿರಿಯೂರಿನ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಬೀದಿಬದಿ ವ್ಯಾಪಾರಿಗಳ ಘಟಕದ ನಾಮಫಲಕವನ್ನು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಕೆ. ರಾಮಚಂದ್ರ ಉದ್ಘಾಟಿಸಿದರು 
ಹಿರಿಯೂರಿನ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಬೀದಿಬದಿ ವ್ಯಾಪಾರಿಗಳ ಘಟಕದ ನಾಮಫಲಕವನ್ನು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಕೆ. ರಾಮಚಂದ್ರ ಉದ್ಘಾಟಿಸಿದರು    

ಹಿರಿಯೂರು: ‘ನಗರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ಹಣ್ಣು– ತರಕಾರಿ ಇತ್ಯಾದಿ ವ್ಯಾಪಾರ ಮಾಡುವ ಮೂಲಕ ಜೀವನ ಸಾಗಿಸುತ್ತಿರುವ ಬಡವರ ವ್ಯಾಪಾರಕ್ಕೆ ಅಧಿಕಾರಿಗಳು ತೊಂದರೆ ಕೊಟ್ಟಲ್ಲಿ ಹೋರಾಟ ನಡೆಸಬೇಕಾಗುತ್ತದೆ’ ಎಂದು ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ಸಂಸ್ಥಾಪಕ  ಕೆ. ರಾಮಚಂದ್ರ ಎಚ್ಚರಿಸಿದರು.

ನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ಸಮಿತಿಯ ತಾಲ್ಲೂಕು ಶಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬೀದಿಬದಿ ವ್ಯಾಪಾರಿಗಳ ಘಟಕದ ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಮುಖ ರಸ್ತೆಗಳಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ದರ ಕೇಳಿದರೆ ಬಡವರ ಜೀವ ಕೈಗೆ ಬರುತ್ತದೆ. ಅಷ್ಟೊಂದು ಹಣ ಕೊಟ್ಟು ವ್ಯಾಪಾರ ಮಾಡುವ ಶಕ್ತಿ ಇಲ್ಲದವರು ಮಳೆ– ಬಿಸಿಲು– ಚಳಿ ಎನ್ನದೆ ಅಂದಂದಿನ ಖರ್ಚಿಗೆ ಬೇಕಿರುವ ಹಣವನ್ನು ಸಂಪಾದಿಸಿಕೊಳ್ಳುತ್ತಾರೆ. ನಗರಸಭೆಯವರು ಸಾಧ್ಯವಾದರೆ ಇಂತಹ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಸಾಲ ಕೊಡಿಸಬೇಕು. ನಗರಸಭೆಯ ವಿವಿಧ ಯೋಜನೆಗಳಡಿ ಸಾಧ್ಯವಿರುವ ಆರ್ಥಿಕ ನೆರವು ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ಮುಖಂಡರಾದ ನರಸಿಂಹಸ್ವಾಮಿ, ಆರ್. ಶಿವರಾಜ್ ಕುಮಾರ್, ಸಾಧಿಕ್ ಸೀಮೆಣ್ಣೆ, ಲಕ್ಷ್ಮಣ್ ರಾವ್, ಕೆಂಚಪ್ಪ, ಸಿ.ಮಲ್ಲೇಶ್, ಕೆ. ಓಂಕಾರಮೂರ್ತಿ, ದೇವರಾಜ್, ಎಸ್.ಕೆ. ದಾಸಣ್ಣ, ಸೂರಗೊಂಡನಹಳ್ಳಿ ತಿಪ್ಪೇಸ್ವಾಮಿ, ಹರ್ತಿಕೋಟೆ ಅಶೋಕ್, ಟಿ. ರಾಘವೇಂದ್ರ, ಷರೀಫ್‌, ನಯಾಜ್, ದಾದಾಪೀರ್, ಜಯಣ್ಣ, ಶಿವಮ್ಮ, ಮಹಂತಮ್ಮ, ಬಸಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.