
ಹಿರಿಯೂರು: ವಿದ್ಯಾರ್ಥಿಗಳಿಗೆ ನಿಗದಿತ ಪಠ್ಯದ ಜೊತೆ ಭವಿಷ್ಯದ ಬದುಕು ರೂಪಿಸಿಕೊಳ್ಳಲು ಬೇಕಿರುವ ಕೌಶಲ ಬೋಧನೆಗೆ ಶಿಕ್ಷಕರು ಗಮನಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸಲಹೆ ನೀಡಿದರು.
ತಾಲ್ಲೂಕಿನ ಮಲ್ಲಪ್ಪನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಶಾಲೆಯ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದರು.
‘ನೈಜ ಪ್ರತಿಭೆಗಳಿರುವುದು ಗ್ರಾಮೀಣ ಪ್ರದೇಶದಲ್ಲಿ ಎಂಬುದನ್ನು ಹಲವು ಸಂದರ್ಭಗಳಲ್ಲಿ ಕಂಡಿದ್ದೇವೆ. ಇಲ್ಲಿನ ಮಕ್ಕಳಿಗೆ ಇನ್ನೊಂದಿಷ್ಟು ಪ್ರೋತ್ಸಾಹ, ಮಾರ್ಗದರ್ಶನ ಕೊಟ್ಟಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುತ್ತಾರೆ. ಈ ನಿಟ್ಟಿನಲ್ಲಿ ಶಿಕ್ಷಕರು ತಂತ್ರಜ್ಞಾನ ಬಳಸಿಕೊಂಡು ಮಕ್ಕಳನ್ನು ತಯಾರು ಮಾಡಬೇಕು‘ ಎಂದು ಸಲಹೆ ನೀಡಿದರು.
‘ಹಳೆಯದಾಗಿರುವ ಕಟ್ಟಡದ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸಲು ಎಲ್ಲ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.