ADVERTISEMENT

ಉಪ್ಪಾರ ಸಮಾಜ ಎಸ್ಟಿಗೆ ಸೇರಿಸಲು ಸ್ವಾಮೀಜಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 5:28 IST
Last Updated 11 ಅಕ್ಟೋಬರ್ 2020, 5:28 IST
ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸಬೇಕು ಎಂದು ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಸಮಾಜದ ಮುಖಂಡರು ಬೆಂಗಳೂರಿನಲ್ಲಿ ಶನಿವಾರ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಮಾಡಿದರು
ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸಬೇಕು ಎಂದು ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಸಮಾಜದ ಮುಖಂಡರು ಬೆಂಗಳೂರಿನಲ್ಲಿ ಶನಿವಾರ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಮಾಡಿದರು   

ಹೊಸದುರ್ಗ: ಉಪ್ಪಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ಕೊಡಬೇಕು ಎಂದು ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಸಮಾಜದ ಮುಖಂಡರು ಬೆಂಗಳೂರಿನಲ್ಲಿ ಶನಿವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಹಕ್ಕೊತ್ತಾಯ ಮಾಡಿದರು.

ಉಪ್ಪಾರ ಸಮುದಾಯ ಎಲ್ಲಾ ಕ್ಷೇತ್ರದಲ್ಲಿಯೂ ಸಾಕಷ್ಟು ಹಿಂದುಳಿದಿದೆ. ಇಂತಹ ಸಮಾಜದ ಅಭಿವೃದ್ಧಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಪುರುಷೋತ್ತಮಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು.

ಉಪ್ಪಾರ ಸಮಾಜದ ರಾಜ್ಯ ಅಧ್ಯಕ್ಷ ಬಸವರಾಜಪ್ಪ ತುರ್ಚಘಟ್ಟ, ಸಂಘಟನೆ ಕಾರ್ಯಾಧ್ಯಕ್ಷ ಲಕ್ಷ್ಮಣ ಉಪ್ಪಾರ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಆರ್. ಮೂರ್ತಿ, ಯುವ ಘಟಕದ ಅಧ್ಯಕ್ಷ ವೆಂಕಟೇಶ್, ಮೈಸೂರು ಮುಖಂಡ ವಿಷಕಂಠ, ಉದ್ಯಮಿ ರಮೇಶ್, ಮಂಜುನಾಥ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.