ಸಿರಿಗೆರೆ: ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳ ಸಾಧನೆಗೆ ತೋರುವ ಗೌರವ. ಅವರನ್ನು ಅಭಿನಂದಿಸಿ ಪ್ರೋತ್ಸಾಹಿಸುವ ಕೆಲಸ ಅಭಿನಂದನಾರ್ಹ ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಮಂಜುನಾಥ್ ತಿಳಿಸಿದರು.
ಸಮೀಪದ ಕಡ್ಲೆಗುದ್ದು ಗ್ರಾಮದಲ್ಲಿನ ಆಂಜನೇಯಸ್ವಾಮಿ ಪ್ರೌಢಶಾಲೆಯಲ್ಲಿ ದಿ. ಕೆಂಚಮ್ಮ ದಿ. ವೀರಬಸಪ್ಪ ಸ್ಮರಣಾರ್ಥವಾಗಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳೇ ಸಮಾಜದ ಆಸ್ತಿ ಎಂದು ಭಾವಿಸಿ ಸಂಗೀತ ಕಲಾವಿದರಾದ ಗುರುಮೂರ್ತಿಯವರು ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಲಿದೆ ಎಂದು ಡಯಟ್‌ನ ಹಿರಿಯ ಉಪನ್ಯಾಸಕ ನಾಗರಾಜ್ ಅಭಿಪ್ರಾಯಪಟ್ಟರು.
ಹಿರಿಯ ಸಂಗೀತ ಕಲಾವಿದ ಗುರುಮೂರ್ತಿ, ಮುಖ್ಯ ಶಿಕ್ಷಕ ಮಹೇಶ್ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಆನಂದ್ ರೆಡ್ಡಿ, ಅರುಣ್ ಕುಮಾರ್, ಮಜಾಹರ್ ಉಲ್ಲಾ, ವೀರೇಶ್, ಶಿಕ್ಷಕರಾದ ಮಂಜುನಾಥ್, ಮಂಜಪ್ಪ, ನಾಗರಾಜ್, ನಟರಾಜ್, ಕರಿಬಸಪ್ಪ ಹಾಗೂ ಮಹಾಂತೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.