ADVERTISEMENT

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಹತ್ತು ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2020, 3:49 IST
Last Updated 19 ಫೆಬ್ರುವರಿ 2020, 3:49 IST
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್   

ಚಿತ್ರದುರ್ಗ: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಪಲ್ಟಿಯಾಗಿ ಹತ್ತು ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಹೊರವಲಯದ ಕುಂಚಿಗನಾಳ್ ಬಳಿಯ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನಲ್ಲಿ ಸಂಭವಿಸಿದೆ.

ದಾವಣಗೆರೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಬಸ್ ಕಣಿವೆ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ದಾಟಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದೆ. ಪಲ್ಟಿಯಾದ ಬಸ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.