ಮೊಳಕಾಲ್ಮುರು: ಪರಿಸರ ಸಂರಕ್ಷಣೆ, ದುಚ್ಚಟಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಸಿದ್ದಯ್ಯನಕೋಟೆ ವಿಜಯ ಮಹಾಂತೇಶ್ವರ ಮಠದ ಬಸವಲಿಂಗ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಸಿದ್ದಯ್ಯನಕೋಟೆ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪರಿಸರ ಸಂರಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರ ಅಸಮತೋಲನದಿಂದ ಅತಿವೃಷ್ಠಿ, ಅನಾವೃಷ್ಟಿ ಹೆಚ್ಚುತ್ತಿವೆ. ಪರಿಸರದ ಮೇಲೆ ಮನುಷ್ಯ ಮಾಡುತ್ತಿರುವ ದೌರ್ಜನ್ಯವನ್ನು ನಿಲ್ಲಿಸಬೇಕಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಸಂಸ್ಥೆಯು ಎಲ್ಲಾ ಕಡೆ ಜಾಗೃತಿ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಮುಖ್ಯಶಿಕ್ಷಕಿ ಯಶೋಧಮ್ಮ, ಸಂಸ್ಥೆಯ ಕೃಷಿ ಮೇಲ್ವಿಚಾರಕ ಬೋರಯ್ಯ, ಮಠದ ಕಾರ್ಯದರ್ಶಿ ಪಿ.ಆರ್. ಕಾಂತರಾಜ್ ಮತ್ತು ಶಿಕ್ಷಕರು ಇದ್ದರು. ಇದೇ ವೇಳೆ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.