ADVERTISEMENT

ದ್ವಿಚಕ್ರ ವಾಹನಕ್ಕೆ ಬಸ್‌ ಡಿಕ್ಕಿ: ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 12:28 IST
Last Updated 3 ಅಕ್ಟೋಬರ್ 2022, 12:28 IST

ಹೊಳಲ್ಕೆರೆ (ಚಿತ್ರದುರ್ಗ): ಪಟ್ಟಣದ ಹೊರವಲಯದ ಕುಕ್ವಾಡೇಶ್ವರಿ ದೇವಸ್ಥಾನದ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ತಾಲ್ಲೂಕಿನ ರಂಗಾಪುರ ಗ್ರಾಮದ ಚಂದ್ರಪ್ಪ (24), ಮಾಳೇನಹಳ್ಳಿಯ ಸತೀಶ (24) ಹಾಗೂ ಮನು (26) ಮೃತರು. ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಬಸ್‌, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಅಪ್ಪಳಿಸಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT