ADVERTISEMENT

ಹಿರಿಯೂರು: ಟಾಟಾ ಏಸ್ ಪಲ್ಟಿಯಾಗಿ ಮೂವರು ಕೂಲಿ ಕಾರ್ಮಿಕರ ಸಾವು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 4:53 IST
Last Updated 26 ಏಪ್ರಿಲ್ 2021, 4:53 IST
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಾಟಾ ಏಸ್
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಾಟಾ ಏಸ್   

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಚಳ್ಳಕೆರೆ ರಸ್ತೆಯ 103ನೇ ಕ್ರಾಸ್ ಬಳಿ ಟಾಟಾ ಏಸ್ ಪಲ್ಟಿಯಾಗಿ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಮೃತರನ್ನು ಹಿರಿಯೂರಿನ ವೇದಾವತಿ ನಗರದ ತಮಿಳು ಕಾಲೊನಿಯ ಸೆಲ್ವಿ (35), ದೀಪಿಕಾ (6), ನೀಲಮ್ಮ(29) ಎಂದು ಗುರುತಿಸಲಾಗಿದೆ. ಇನ್ನೂ ಒಂಬತ್ತು ಜನರು ಗಾಯಗೊಂಡಿದ್ದು, ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯೂರಿನ ಕೂಲಿ ಕಾರ್ಮಿಕರನ್ನು ಚಳ್ಳಕೆರೆಗೆ ಕರೆದೊಯ್ಯುವಾಗ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಟಾಟಾ ಏಸ್ ಪಲ್ಟಿ ಆಗಿದೆ. ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.