ADVERTISEMENT

ಟಿಕೆಟ್‌: ಹೈಕಮಾಂಡ್‌ ನಿರ್ಧಾರಕ್ಕೆ ಆಕ್ರೋಶ

ವೀರಶೈವ ಲಿಂಗಾಯತ ಯುವ ವೇದಿಕೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಮೇ 2022, 5:19 IST
Last Updated 27 ಮೇ 2022, 5:19 IST
ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಗುರುವಾರ ವೀರಶೈವ ಲಿಂಗಾಯತ ಯುವ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಗುರುವಾರ ವೀರಶೈವ ಲಿಂಗಾಯತ ಯುವ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ವೀರಶೈವ ಲಿಂಗಾಯತ ನಾಯಕರಿಗೆ ವಿಧಾನಪರಿಷತ್‌ ಚುನಾವಣೆಗೆ ಟಿಕೆಟ್‌ ನೀಡದಿರುವ ಪಕ್ಷಗಳ ಕ್ರಮ ಖಂಡಿಸಿ ವೀರಶೈವ ಲಿಂಗಾಯತ ಯುವ ವೇದಿಕೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ಪಕ್ಷಗಳ ಹೈಕಮಾಂಡ್‌ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ಕುತಂತ್ರದಿಂದಾಗಿ ಬಿ.ವೈ.ವಿಜಯೇಂದ್ರ, ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಎಸ್‌.ಆರ್‌. ಪಾಟೀಲ್ ಅವರಿಗೆ ಟಿಕೆಟ್‌ ತಪ್ಪಿಸಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರನ್ನು ಕಡೆಗಣಿಸಿದ್ದಾರೆ. ಇದರ ಫಲಿತಾಂಶ ಚುನಾವಣೆಯಲ್ಲಿ ತಿಳಿಯಲಿದೆ ಎಂದು ಎಚ್ಚರಿಸಿದರು.

ADVERTISEMENT

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ವೀರಶೈವ ಲಿಂಗಾಯತರದ್ದು ಸಿಂಹ ಪಾಲಿದೆ. ಕೂಡಲೇ ಎಲ್ಲ ಪಕ್ಷಗಳು ಈ ಅನ್ಯಾಯ ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಿ ತಕ್ಕ ಪಾಠ ಕಲಿಸಲಾಗುವುದು ಎಂದು ತಿಳಿಸಿದರು.

ಕೆ.ಸಿ. ವೀರೇಂದ್ರ ಪಪ್ಪಿ ಚಿತ್ರದುರ್ಗ ಜಿಲ್ಲೆಯ ವೀರಶೈವ ಲಿಂಗಾಯತರ ಪ್ರಭಾವಿ ನಾಯಕರಾಗಿದ್ದಾರೆ. ರಾಜಕೀಯ ಪಕ್ಷಗಳು ಅವರನ್ನು ಸೂಕ್ತವಾಗಿ ಪರಿಗಣಿಸಿ ಉತ್ತಮ ಸ್ಥಾನ ನೀಡಬೇಕು ಎಂದುಆಗ್ರಹಿಸಿದರು.

ರಾಜ್ಯ ಕಾರ್ಯದರ್ಶಿ ಎಸ್‌.ಎಂ.ಎಲ್‌. ಪ್ರವೀಣ್‌ ಕುಮಾರ್‌, ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಂ. ಮಂಜುನಾಥ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್‌, ತಾಲ್ಲೂಕು ಅಧ್ಯಕ್ಷ ಎಚ್‌. ಪ್ರಶಾಂತ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಗಿರೀಶ್‌, ರಾಜ್ಯ ಮಾನವ ಹಕ್ಕುಗಳ ಮತ್ತು ಕಾರ್ಮಿಕ ಕಲ್ಯಾಣಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಎಸ್‌.ಟಿ. ನವೀನ್‌ ಕುಮಾರ್‌, ಪರಮೇಶ್‌, ಶಿವಕುಮಾರ್‌, ವಿಜಯ್‌, ಬಸವರಾಜ್‌, ಯಶವಂತ್‌, ಬದ್ರಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.