ADVERTISEMENT

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2023, 5:01 IST
Last Updated 1 ಫೆಬ್ರುವರಿ 2023, 5:01 IST
ಚಿತ್ರದುರ್ಗದ ಮಹಾರಾಣಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಮಂಗಳವಾರ ಏರ್ಪಡಿಸಿದ್ದ ಸಂವಾದವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಉದ್ಘಾಟಿಸಿದರು.
ಚಿತ್ರದುರ್ಗದ ಮಹಾರಾಣಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಮಂಗಳವಾರ ಏರ್ಪಡಿಸಿದ್ದ ಸಂವಾದವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಉದ್ಘಾಟಿಸಿದರು.   

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನ ಅಲಂಕರಿಸಬೇಕು. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿ ಸಮಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಕಿವಿಮಾತು ಹೇಳಿದರು.

ಇಲ್ಲಿನ ಮಹಾರಾಣಿ ಪ್ರೌಢಶಾಲೆಯ ವಾಲ್ಮೀಕಿ ಸಭಾಂಗಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಏರ್ಪಡಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.

‘ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಂವಾದ ಹಮ್ಮಿಕೊಳ್ಳಲಾಗುವುದು. ಈ ಮೂಲಕ ಕಲಿಕೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಬೇಕು’ ಎಂದರು.

ADVERTISEMENT

‘ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ವಿದ್ಯಾರ್ಥಿಗಳು ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರನ್ನು ಆದರ್ಶವಾಗಿಟ್ಟುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ವಿದ್ಯಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ, ‘ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿ ಜಿಲ್ಲೆಗೆ ಉತ್ತಮ ಫಲಿತಾಂಶವನ್ನು ತಂದುಕೊಡಬೇಕು’ ಎಂದರು.

ವಿದ್ಯಾಧಿಕಾರಿ ಮಂಜುನಾಥ್, ಶಿಕ್ಷಕರಾದ ಕೆ.ಎನ್.ಮಹೇಶ್, ಬಸ್ವಂತ್ ಕುಮಾರ್, ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.