ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮೃತಪಟ್ಟು ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಅರೇಹಳ್ಳಿಯ ಗ್ರಾಮದ ಗಂಗಮ್ಮ (60), ಸೊಸೆ ಕಾವ್ಯ (30), ಮೊಮ್ಮಕ್ಕಳಾದ ಹನ್ಸಿಕಾ (2), 11 ತಿಂಗಳ ಗಂಡು ಮಗು ಮೃತಪಟ್ಟಿದ್ದಾರೆ. ಕಾರು ಓಡಿಸುತ್ತಿದ್ದ ಗಂಗಮ್ಮ ಪುತ್ರ ಯಶವಂತ್ ತೀವ್ರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟ್ರ್ಯಾಕ್ಟರ್ ನಗರದಿಂದ ಹೊಳಲ್ಕೆರೆ ಕಡೆಗೆ ಚಲಿಸುತ್ತಿತ್ತು. ಚಿತ್ರಹಳ್ಳಿ– ಶಿವಗಂಗಾ ಪೆಟ್ರೋಲ್ ಬಂಕ್ ನಡುವೆ ಹಿಂದಿನಿಂದ ವೇಗವಾಗಿ ಬಂದ ಕಾರು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಹಳೆಯ ಟ್ರ್ಯಾಕ್ಟರ್‌ಗೆ ರಿಫ್ಲೆಕ್ಟರ್ ಇರಲಿಲ್ಲ. ಹೀಗಾಗಿ ಕಾರು ಚಾಲಕನಿಗೆ ಟ್ರ್ಯಾಕ್ಟರ್ ಕಾಣದೇ ಡಿಕ್ಕಿಯಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಜಿಲ್ಲೆಯಲ್ಲಿ ಹಳೆಯ ಟ್ರ್ಯಾಕ್ಟರ್‌ಗಳಿಗೆ ರಿಫ್ಲೆಕ್ಟರ್ ಅಳವಡಿಸುವಂತೆ ಆರ್‌ಟಿಒ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಹಲವು ಬಾರಿ ಸೂಚನೆ ನೀಡಿದ್ದಾರೆ. ಆದರೂ ಆರ್‌ಟಿಒ ಅಧಿಕಾರಿಗಳು ರಿಫ್ಲೆಕ್ಟರ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ’ ಎಂದು ಸ್ಥಳೀಯರು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.