ADVERTISEMENT

ಚಿಕ್ಕಜಾಜೂರು | ರೈಲಿಗೆ ಸಿಲುಕಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 8:45 IST
Last Updated 31 ಡಿಸೆಂಬರ್ 2025, 8:45 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಚಿಕ್ಕಜಾಜೂರು: ಈಚೆಗೆ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸಮೀಪದ ಸಾಸಲು ರೈಲು ನಿಲ್ದಾಣದ ಬಳಿ 55- 60 ವರ್ಷದ ಅಪರಿಚಿತ ವ್ಯಕ್ತಿಯ ಶವ ದೊರೆತಿದೆ. ಮೃತನು ಕಾವಿ ಬಟ್ಟೆ ಧರಿಸಿದ್ದು, ಮೇಲ್ನೋಟಕ್ಕೆ ಸನ್ಯಾಸಿಯಂತೆ ಕಂಡು ಬರುತ್ತಾನೆ. 

ದುಂಡು ಮುಖ, ಸಾಧಾರಣ ಮೈಕಟ್ಟು, ಬೋಳು ತಲೆ ಹೊಂದಿದ್ದಾನೆ. ಶವವನ್ನು ದಾವಣಗೆರೆ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. 

ADVERTISEMENT

ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ ಸಂಪರ್ಕಿಸಲು ಚಿಕ್ಕಜಾಜೂರು ರೈಲ್ವೆ ಪೊಲೀಸ್‌ ಉಪ ಠಾಣೆಯ ಪೊಲೀಸರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 94808 02123 ಅಥವಾ 08192 259643 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.