
ಚಿಕ್ಕಜಾಜೂರು: ಸಮೀಪದ ಹಿರೇಎಮ್ಮಿಗನೂರು ಗ್ರಾಮದ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜ. 16ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ಶಾಸಕರಾಗಿದ್ದ ದಿವಂಗತ ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಲ್ಲೇಶ್ವರ ಸ್ವಾಮಿ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರಿಂದ ನಡೆಯುವ ಕಾರ್ಯಕ್ರಮದಲ್ಲಿ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಎಸ್.ಎಸ್. ಬಕ್ಕೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್.ಸಿದ್ಧಯ್ಯ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ತೋಟಗಾರಿಕೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಉದ್ಯಮಿ ಎಸ್.ಎಸ್. ಗಣೇಶ್, ಅಥಣಿ ವೀರಣ್ಣ, ಅಣಬೇರು ರಾಜಣ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.