ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಐಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಗುರುವಾರ ಸಂಭವಿಸಿದ ಅಪಘಾತದಲ್ಲಿ ಚಾಲಕರೊಬ್ಬರು ಮೃತಪಟ್ಟಿದ್ದಾರೆ.
ತಮಿಳುನಾಡಿನ ಲಾರಿ ಚಾಲಕ ಕವಿ ಅರಸನ್ (44) ಮೃತಪಟ್ಟವರು. ಮತ್ತೊಬ್ಬ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಬೆಳಿಗ್ಗೆ ಲಾರಿಯೊಂದು ಹೆದ್ದಾರಿ ಬದಿಯಲ್ಲಿ ನಿಲುಗಡೆಯಾಗಿತ್ತು. ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಹಿಂಬದಿ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಐಮಂಗಲ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.