ADVERTISEMENT

ಚಿತ್ರದುರ್ಗ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ– 20 ವರ್ಷ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 4:42 IST
Last Updated 22 ಸೆಪ್ಟೆಂಬರ್ 2022, 4:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿತ್ರದುರ್ಗ:ಏಳು ವರ್ಷದ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶ ಹೊರಡಿಸಿದೆ.

ಹಿರಿಯೂರು ತಾಲ್ಲೂಕಿನ ಗ್ರಾಮವೊಂದರ ವೀರೇಶ್‌ ಶಿಕ್ಷೆಗೆ ಒಳಗಾದ ಅಪರಾಧಿ. ಸಂತ್ರಸ್ತ ಬಾಲಕಿಗೆ ₹ 5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಆದೇಶದಲ್ಲಿ ಸೂಚಿಸಿದ್ದಾರೆ.

2019ರ ಡಿಸೆಂಬರ್‌ 23ರಂದು ಅಪರಾಧಿಯು ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಪ್ರಕರಣದತನಿಖೆ ನಡೆಸಿದ್ದ ಹಿರಿಯೂರು ಗ್ರಾಮಾಂತರ
ಠಾಣೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಕೀಲ ಎಚ್‌.ಆರ್‌. ಜಗದೀಶ್‌ ಸರ್ಕಾರದ ಪರ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.