ADVERTISEMENT

ಚಿತ್ರದುರ್ಗ: ಕಾರು- ಬಸ್ ನಡುವೆ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2020, 5:02 IST
Last Updated 27 ಆಗಸ್ಟ್ 2020, 5:02 IST
ಅಪಘಾತದ ದೃಶ್ಯ
ಅಪಘಾತದ ದೃಶ್ಯ   

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿ ಗೇಟ್ ಸಮೀಪದ ಬೆಳಗಾವಿ-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಕಾರು ಹಾಗೂ ಬಸ್ ನಡುವೆ ಗುರುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೂಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ಲಿಂಗಸುಗೂರು ತಾಲ್ಲೂಕಿನ ಗೌಡೂರು ಗ್ರಾಮದ ಸಾಯಿಬಣ್ಣ (35) ಮತ್ತು ವೆಂಕಟೇಶ್ (30) ಎಂದು ಗುರುತಿಸಲಾಗಿದೆ .ಆನಂದ್ (33) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಗುರುವಾರ ಬೆಳಿಗ್ಗೆ ಕಾರು ಚಳ್ಳಕೆರೆ ಕಡೆಯಿಂದ ಹಿರಿಯೂರಿಗೆ ಬರುತ್ತಿತ್ತು. ಸಂಜನಾ ಟ್ರಾವೆಲ್ಸ್ ಬಸ್ ಹಿರಿಯೂರು ಕಡೆಯಿಂದ ಚಳ್ಳಕೆರೆಗೆ ಹೋಗುತ್ತಿದ್ದಾಗ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಐಮಂಗಲ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.