ADVERTISEMENT

ಚಿತ್ರದುರ್ಗ: ಹಿರಿಯೂರು ಸಮೀಪ ಬಸ್ ಪಲ್ಟಿ ಸ್ಥಳದಲ್ಲೇ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 1:38 IST
Last Updated 6 ಡಿಸೆಂಬರ್ 2020, 1:38 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಹಿರಿಯೂರು (ಚಿತ್ರದುರ್ಗ): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಿರಿಯೂರು ನಗರದ ಚಳ್ಳಕೆರೆ ರಸ್ತೆಯಲ್ಲಿ ಭಾನುವಾರ ನಸುಕಿನಲ್ಲಿ ನಡೆದಿದೆ.

ಶಹಾಪುರದಿಂದ ಬೆಂಗಳೂರು ಕಡೆ ಹೋಗುವಾಗ ನಸುಕಿನ 4.30 ಸಮಯಕ್ಕೆ ರಸ್ತೆಯ ಎಡಭಾಗಕ್ಕೆ ಪಲ್ಟಿ ಹೊಡೆದು ಈ ಘಟನೆ ಸಂಭವಿಸಿದೆ.

ಬಸ್ಸಿನಲ್ಲಿ ಮಹಿಳೆಯರು, ಪುರುಷರು, ಮಕ್ಕಳು ಸೇರಿ ಸುಮಾರು 50 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಇದರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆಯುತ್ತಿದ್ದಂತೆ ಬಸ್ ಚಾಲಕ ಮತ್ತು ನಿರ್ವಾಹಕ ನಾಪತ್ತೆಯಾಗಿದ್ದಾರೆ. ವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.