ನಗರಂಗೆರೆ (ಚಳ್ಳಕೆರೆ): ತಾಲ್ಲೂಕಿನ ನಗರಂಗೆರೆ ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗದ್ದಿಗೆ ತಿಪ್ಪೇಸ್ವಾಮಿ, ಉಪಾಧ್ಯಕ್ಷರಾಗಿ ಬೋರಮ್ಮ ಅವಿರೋಧವಾಗಿ ಆಯ್ಕೆಯಾದರು.
ಎಂ.ಕುಮಾರಸ್ವಾಮಿ, ಆರ್.ತಿಪ್ಪೇರುದ್ರಪ್ಪ, ಎ.ರಾಜಶೇಖರ್, ರಾಮಚಂದ್ರ, ಸುರೇಶ್, ಬಿ.ಸಿ.ಸಂಜೀವಮೂರ್ತಿ, ಕೋಮಲಮ್ಮ, ಶಾಂತಪ್ಪ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.