ADVERTISEMENT

ಚಿತ್ರದುರ್ಗ ನಗರದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 15:52 IST
Last Updated 13 ಜೂನ್ 2025, 15:52 IST
ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರಿಗೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಮನವಿ ಸಲ್ಲಿಸಿದರು
ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರಿಗೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಮನವಿ ಸಲ್ಲಿಸಿದರು   

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಪುನರ್ಬಳಕೆಗೆ ಸಾಧ್ಯವಾಗದ ಪ್ಲಾಸ್ಟಿಕ್‌ ಹೆಚ್ಚಾಗಿದೆ. ಕೂಡಲೇ ಇದರ ನಿಷೇಧಕ್ಕೆ ಕ್ರಮವಹಿಸಬೇಕು. ಇಲ್ಲವಾದರೆ ನಗರಸಭೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಎಚ್ಚರಿಸಿದ್ದಾರೆ.

ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರಿಗೆ ಗುರುವಾರ ಮನವಿ ಸಲ್ಲಿಸಿದ ಅವರು, ರಸ್ತೆಗಳ ಪಕ್ಕದಲ್ಲೇ ಪ್ಲಾಸ್ಟಿಕ್‌ ಕವರ್‌ಗಳನ್ನು ಬಿಸಾಡುತ್ತಿರುವ ಪರಿಣಾಮ ಪ್ರಾಣಿ-ಪಕ್ಷಿಗಳು ಅವುಗಳನ್ನು ತಿಂದು ಆರೋಗ್ಯಕ್ಕೆ ಹಾನಿಯಾಗುತ್ತಿದೆ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಕ್ಯಾನ್ಸರ್ ರೋಗಕ್ಕೂ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಕಪ್‌ಗಳು, ಪ್ಲೇಟ್‌ಗಳು, ಕೈಚೀಲಗಳು, ಆಹಾರ ಪದಾರ್ಥಗಳಿಗೆ ಪ್ಯಾಕಿಂಗ್‌ ಸೇರಿ ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಅತಿರೇಕಕ್ಕೆ ತಲುಪಿದೆ. ಅವುಗಳನ್ನು ಚರಂಡಿಗಳಿಗೆ ಎಸೆಯಲಾಗುತ್ತಿದೆ. ಇದರಿಂದ ನೀರು ಸರಾಗವಾಗಿ ಹರಿಯದೆ ಮಳೆಗಾಲದಲ್ಲಿ ಸಮಸ್ಯೆ ಆಗುತ್ತಿದೆ. ತರಕಾರಿ ಮಾರುಕಟ್ಟೆಯಲ್ಲಿ ಶುಚಿತ್ವದ ಸಮಸ್ಯೆ ಕಾಡುತ್ತಿದ್ದು ಸ್ತ್ರೀಯರು, ಹಿರಿಯರು ಮಾರುಕಟ್ಟೆ ಒಳಗಡೆ ಹೋಗದಂತ ಕಲುಷಿತ ವಾತಾವರಣ ಸೃಷ್ಟಿಯಾಗಿದೆ ಎಂದು ದೂರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.