ಚಳ್ಳಕೆರೆ: ತಾಲ್ಲೂಕಿನ ಪರಶುರಾಂಪುರ ಹೋಬಳಿ ವ್ಯಾಪ್ತಿಯ ನಾಗಪ್ಪನಹಳ್ಳಿ ಗೇಟ್ ಬಳಿ ರಸ್ತೆಗೆ ಅಡ್ಡವಾಗಿ ನಿರ್ಮಿಸಿಕೊಂಡಿರುವ ಗೂಡಂಗಡಿಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಪಿಲ್ಲಹಳ್ಳಿ ಸಿ.ಚಿತ್ರಲಿಂಗಪ್ಪ ಸೋಮವಾರ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
‘ಆಂಧ್ರದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ನಾಗಪ್ಪನಹಳ್ಳಿ ಗೇಟ್ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ.
ಹೀಗಾಗಿ ಅಧಿಕಾರಿಗಳು ಭೇಟಿ ನೀಡಿ ಗ್ರಾಮ ಪರಿಶೀಲನೆ ನಡೆಸುವ ಮೂಲಕ ಇಲ್ಲಿನ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು, ಸಾರ್ವಜನಿಕ ಶೌಚಾಲಯ ಮತ್ತು ಪ್ರಯಾಣಿಗರಿಗೆ ತಂಗುದಾಣ ಮುಂತಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಣ್ಣ, ಜಿಲ್ಲಾ ನವಜಾಗೃತಿ ಯುವ ವೇದಿಕೆ ಸಂಘಟನಾ ಕಾರ್ಯದರ್ಶಿ ಕೆ.ಚಿಕ್ಕಣ್ಣ, ರವೀಂದ್ರನಾಥ ಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.