ಹಿರಿಯೂರು: ತಾಲ್ಲೂಕಿನ ವಾಣಿವಿಲಾಸ ಜಲಾಶಯ ಕೋಡಿ ಬೀಳಲು ಕ್ಷಣಗಣನೆ ಆರಂಭವಾಗಿದ್ದು, ಮಂಗಳವಾರ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅವರೊಂದಿಗೆ ವಿವಿ ಸಾಗರಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಈ ಸಮಯದಲ್ಲಿ ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಖಾದಿ ರಮೇಶ್, ಭದ್ರಾ ಮೇಲ್ದಂಡೆ ಯೋಜನೆಯ ಕಾರ್ಯಪಾಲಕ ಎಂಜಿನಿಯರ್ ಚಂದ್ರಪ್ಪ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರಯ್ಯ, ಸಹಾಯಕ ಎಂಜಿನಿಯರ್ ವೆಂಕಟೇಶ್, ತಹಶೀಲ್ದಾರ್ ರಾಜೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್. ನಾಗೇಂದ್ರನಾಯ್ಕ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.