ADVERTISEMENT

ಶಾಮನೂರು ಶಿವಶಂಕರಪ್ಪಗೆ ವೀರಶೈವ ಮಹಾಸಭಾ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 8:30 IST
Last Updated 16 ಡಿಸೆಂಬರ್ 2025, 8:30 IST
ಹಿರಿಯೂರಿನ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಸೋಮವಾರ ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ವತಿಯಿಂದ ನಡೆದ ಸಂತಾಪ ಸೂಚಕ ಸಭೆಯಲ್ಲಿ ಭಾನುವಾರ ನಿಧನರಾದ ಶಾಮನೂರು ಶಿವಶಂಕರಪ್ಪ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು.
ಹಿರಿಯೂರಿನ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಸೋಮವಾರ ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ವತಿಯಿಂದ ನಡೆದ ಸಂತಾಪ ಸೂಚಕ ಸಭೆಯಲ್ಲಿ ಭಾನುವಾರ ನಿಧನರಾದ ಶಾಮನೂರು ಶಿವಶಂಕರಪ್ಪ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು.   

ಹಿರಿಯೂರು: ವೀರಶೈವ– ಲಿಂಗಾಯತ ಸಮಾಜದ ರಾಜ್ಯದ ಅಗ್ರಗಣ್ಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸೋಮವಾರ ನಗರದ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಿ, ಮೃತರ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು.

‘ಬೇಡಿ ಬಂದವರಿಗೆ ಎಂದೂ ಬರಿಗೈಯಲ್ಲಿ ಕಳಿಸದ ದಾನಿ ಎಸ್.ಎಸ್., ದಾವಣಗೆರೆಯನ್ನು ಶಿವಶಂಕರಪ್ಪನವರ ಹೆಸರು ಇಲ್ಲದೆ ಊಹಿಸಲೂ ಆಗದು. ಶಿಕ್ಷಣ ಸಂಸ್ಥೆಗಳು, ಬ್ಯಾಂಕುಗಳು, ಉದ್ಯಮಗಳ ಮೂಲಕ ಸಾವಿರಾರು ಯುವಕರಿಗೆ ಉದ್ಯೋಗ ದೊರಕಿಸಿಕೊಟ್ಟಿರುವ ಕಲ್ಪವೃಕ್ಷ. ವೀರಶೈವ–ಲಿಂಗಾಯತ ಸಮುದಾಯವನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂಬ ನಿಟ್ಟಿನಲ್ಲಿ ಅವರು ನಡೆಸಿದ ಪ್ರಯತ್ನಗಳು ಮಹಾಸಭಾದ ನೇತೃತ್ವವನ್ನು ಮುಂದೆ ವಹಿಸಿಕೊಳ್ಳುವವರಿಗೆ ಮಾರ್ಗದರ್ಶನ ನೀಡಲಿವೆ’ ಎಂದು ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ್ ಗುಡಾಣಮಠ್ ಹೇಳಿದರು.

ಸಭೆಯಲ್ಲಿ ಕಾರ್ಯದರ್ಶಿ ಪ್ರಸಾದ್, ಅರುಣಕುಮಾರ್, ಪರಮೇಶ್, ತಿಪ್ಪೇರುದ್ರಸ್ವಾಮಿ, ಪ್ರದೀಪ್, ಸ್ವಾಮಿ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.