ADVERTISEMENT

ಲಾರಿಗೆ ವಾಹನ ಡಿಕ್ಕಿ; ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 5:27 IST
Last Updated 22 ಏಪ್ರಿಲ್ 2021, 5:27 IST

ಚಿತ್ರದುರ್ಗ: ತಾಲ್ಲೂಕಿನ ಜಾನಕೊಂಡ ಗ್ರಾಮದ ಓಬಳನರಸಿಂಹಸ್ವಾಮಿ ಪ್ರೌಢಶಾಲೆ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಮಾರ್ಗದಲ್ಲಿ ಮಂಗಳವಾರ ಟಿಪ್ಪರ್ಗೆ ಸ್ಕೂಟಿ ಡಿಕ್ಕಿ ಹೊಡೆದು ಯುವಕ ಮೃತಪಟ್ಟಿದ್ದಾನೆ.

ಹುಲ್ಲೂರು ಗ್ರಾಮದ ಎನ್.ಬಿ. ಲೋಹಿತ್ (26) ಮೃತಪಟ್ಟ ಯುವಕ.

ಜಾನಕೊಂಡ ಮಾರ್ಗವಾಗಿ ಸಂಚರಿಸುತ್ತಿದ್ದ ಲಾರಿಯ ಚಾಲಕ ಯಾವುದೇ ಮುನ್ಸೂಚನೆ ನೀಡದೆ, ಇದ್ದಕ್ಕಿದ್ದಂತೆ ಲಾರಿ ನಿಲ್ಲಿಸಿದ್ದರಿಂದ ಸ್ಕೂಟಿ ಸವಾರ ಹಿಂಬದಿಗೆ ಡಿಕ್ಕಿ ಹೊಡೆದಿದ್ದ. ಆತನನ್ನು ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹೀಗೆ ಮೂರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.