ADVERTISEMENT

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ರಕ್ಷಣೆಗೆ JDS ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2025, 1:58 IST
Last Updated 10 ಆಗಸ್ಟ್ 2025, 1:58 IST
ಎಂ. ರವೀಂದ್ರಪ್ಪ
ಎಂ. ರವೀಂದ್ರಪ್ಪ   

ಹಿರಿಯೂರು: ‘ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಆವರಣದಲ್ಲಿರುವ ನಟ ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಿದ್ದರೂ ಸರ್ಕಾರ ಮೌನ ವಹಿಸಿರುವುದು ಸರಿಯಲ್ಲ. ಕನಿಷ್ಟ ಅವರ ಸಮಾಧಿ ಸ್ಥಳವನ್ನಾದರೂ ರಕ್ಷಿಸುವ ಕೆಲಸಕ್ಕೆ ಸರ್ಕಾರ ತಕ್ಷಣ ಮುಂದಾಗಬೇಕು’ ಎಂದು ಜೆಡಿಎಸ್ ಮುಖಂಡ ಎಂ. ರವೀಂದ್ರಪ್ಪ ಒತ್ತಾಯಿಸಿದ್ದಾರೆ.

‘ಕನ್ನಡ ಚಲನಚಿತ್ರರಂಗಕ್ಕೆ ತನ್ನದೇ ಕೊಡುಗೆ ನೀಡಿರುವ ವಿಷ್ಣು ಅವರಿಗೆ ಕೋಟ್ಯಾನು ಕೋಟಿ ಅಭಿಮಾನಿಗಳಿದ್ದಾರೆ. ಸಮಾಧಿ ಸ್ಥಳದಲ್ಲಿ ನಿರ್ಮಿಸಿದ್ದ ಮಂಟಪವನ್ನು ಒಡೆದು ಹಾಕಿರುವುದು ಕನ್ನಡ ಚಿತ್ರರಂಗ ಹಾಗೂ ವಿಷ್ಣು ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ. ಸರ್ಕಾರ ಯಾವುದೇ ಬೆಲೆ ತೆತ್ತಾದರೂ ಸರಿ ಸಮಾಧಿ ಸ್ಥಳವನ್ನು ಉಳಿಸಲೇಬೇಕು. ಸರ್ಕಾರಕ್ಕೆ ಹಣದ ಕೊರತೆ ಇದ್ದರೆ ಬಹಿರಂಗವಾಗಿ ಹೇಳಲಿ, ನಾಡಿನ ಮನೆಮನೆಗಳಲ್ಲಿ ಹಣ ಸಂಗ್ರಹಿಸಿ ಕೊಡುತ್ತೇವೆ’ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT