ಪರಶುರಾಂಪುರ: ತಾಲ್ಲೂಕಿನ ಚಿಕ್ಕಚೆಲ್ಲೂರು ಗ್ರಾಮದಲ್ಲಿ ಭಾನುವಾರ ತಲೆನೋವು ತಾಳಲಾರದೆ ಬೇರೆ ಮಾತ್ರೆಗಳನ್ನು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗ್ರಾಮದ ರಂಗಮ್ಮ (28) ಒಂದು ವರ್ಷದಿಂದ ತಲೆನೋವಿನಿಂದ ಬಳಲುತ್ತಿ ದ್ದರು. ಹಲವು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಕಡಿಮೆಯಾಗಿರಲಿಲ್ಲ. ನೋವು ತಾಳಲಾರದೆ ಶನಿವಾರ ಮಧ್ಯಾಹ್ನ ಮನೆಯಲ್ಲಿದ್ದ ಯಾವುದೋ ಮಾತ್ರೆ ಸೇವಿಸಿ ಅಸ್ವಸ್ಥರಾಗಿದ್ದರು. ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದುಎಎಸ್‍ಐ ರವೀಂದ್ರ ತಿಳಿಸಿದ್ದಾರೆ.ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.