ADVERTISEMENT

ಚಿತ್ರದುರ್ಗ: ರೈಲು ಹಳಿ ಮೇಲೆ ಮಹಿಳೆ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2019, 6:12 IST
Last Updated 3 ಫೆಬ್ರುವರಿ 2019, 6:12 IST

ಚಿತ್ರದುರ್ಗ: ತಾಲ್ಲೂಕಿನ ಮದಕರಿಪುರ ಸಮೀಪದ ರೈಲು ಹಳಿಯ ಮೇಲೆ ಮಹಿಳೆಯೊಬ್ಬರ ಶವ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮಹಿಳೆ ಮೃತಪಟ್ಟಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸುಮಾರು 35ರಿಂದ 40 ವರ್ಷದ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT