ADVERTISEMENT

ಹೊಸದುರ್ಗ | ಸರ್ಕಾರಿ ಮಹಿಳಾ ನೌಕರರ ಸಂಘದ ಶಾಖೆ ಆರಂಭ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 5:26 IST
Last Updated 21 ಜನವರಿ 2026, 5:26 IST
ಹೊಸದುರ್ಗದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಮಹಿಳಾ ಘಟಕದ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು
ಹೊಸದುರ್ಗದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಮಹಿಳಾ ಘಟಕದ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು   

ಹೊಸದುರ್ಗ: ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಸರ್ಕಾರಿ ಮಹಿಳಾ ನೌಕರರ ಸಂಘದ ತಾಲ್ಲೂಕು ಶಾಖೆಯನ್ನು ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶೈಲಜಾ ಉದ್ಘಾಟಿಸಿದರು. 

ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಎಚ್.ಜಿ. ಮಂಜುಳಾಕ್ಷಿ, ಗೌರವಾಧ್ಯಕ್ಷರಾಗಿ ನಿರ್ಮಲಾ, ಉಪಾಧ್ಯಕ್ಷರಾಗಿ ಇಂದ್ರಮ್ಮ, ಕಾರ್ಯದರ್ಶಿಯಾಗಿ ಶ್ರೀನಿಧಿ, ಸಂಘಟನಾ ಕಾರ್ಯದರ್ಶಿಯಾಗಿ ದ್ರಾಕ್ಷಾಯಣಮ್ಮ, ಪರಮ್ಮ, ಸಹ ಕಾರ್ಯದರ್ಶಿಗಳಾಗಿ ಮಮತಾ, ಫಾತಿಮಾ, ಕುಸುಮಾ ಆಯ್ಕೆಯಾದರು. 18 ನಿರ್ದೇಶಕರ ಆಯ್ಕೆಯೂ ನಡೆಯಿತು.  

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಕುಮಾರ್, ಮಹಿಳಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ವಿಶಾಲಾಕ್ಷಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ನಾಗಪ್ಪ, ಮಹಾಂತೇಶ್, ಮಲ್ಲೇಶ್ ಸೇರಿದಂತೆ ಮಹಿಳಾ ನೌಕರರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.