ADVERTISEMENT

ಸರ್ಕಾರದ ಕೊಂಡಿಯಾಗಿ ಕೆಲಸ ಮಾಡಿ: ಸುನಿತಾ ಜಗದೀಶ್

​ಪ್ರಜಾವಾಣಿ ವಾರ್ತೆ
Published 30 ಜುಲೈ 2021, 6:27 IST
Last Updated 30 ಜುಲೈ 2021, 6:27 IST
ಭರಮಸಾಗರ ದೊಡ್ಡಪೇಟೆ ಶಿವಯೋಗಿ ಮಂದಿರದ ಸಭಾಂಗಣದಲ್ಲಿ ಗುರುವಾರ ಬಿಜೆಪಿ ಮಹಿಳಾ ಮೋರ್ಚಾ 3ನೇ ಕಾರ್ಯಕಾರಿಣಿ ನಡೆಯಿತು. ರಾಜ್ಯ ಬಿಜಿಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುನಿತಾ ಜಗದೀಶ್ ಇದ್ದರು.
ಭರಮಸಾಗರ ದೊಡ್ಡಪೇಟೆ ಶಿವಯೋಗಿ ಮಂದಿರದ ಸಭಾಂಗಣದಲ್ಲಿ ಗುರುವಾರ ಬಿಜೆಪಿ ಮಹಿಳಾ ಮೋರ್ಚಾ 3ನೇ ಕಾರ್ಯಕಾರಿಣಿ ನಡೆಯಿತು. ರಾಜ್ಯ ಬಿಜಿಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುನಿತಾ ಜಗದೀಶ್ ಇದ್ದರು.   

ಭರಮಸಾಗರ: ಪದಾಧಿಕಾರಿಗಳು ಸರ್ಕಾರ ಮತ್ತು ಜನ ಇವರ ನಡುವಿನ ಕೊಂಡಿಯಾಗಿ ಕೆಲಸ ಮಾಡಿ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುನಿತಾ ಜಗದೀಶ್ ಹೇಳಿದರು.

ಪಟ್ಟಣದ ದೊಡ್ಡಪೇಟೆ ಶಿವಯೋಗಿ ಮಂದಿರದ ಸಭಾಂಗಣದಲ್ಲಿ ಗುರುವಾರ ನಡೆದ ಮಂಡಲ ಮಹಿಳಾ ಮೋರ್ಚಾದ 3ನೇ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

ಪಕ್ಷದ ಪದಾಧಿಕಾರಿಗಳು ಕೊಟ್ಟ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿ ಸಂಘಟನೆ ಮಾಡಬೇಕು. ಸಾಮಾಜಿಕ ಕಾರ್ಯ ಚಟುವಟಿಕೆ ಹಮ್ಮಿಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಎಲ್ಲರಿಗೂ ಸಿಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ADVERTISEMENT

ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೈಲಜಾ ರೆಡ್ಡಿ ಮಾತನಾಡಿ, ‘ಕಾರ್ಯಕರ್ತರು ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಸಂಘಟನೆಯನ್ನು ಬಲಪಡಿಸಬೇಕು. ಹೋಬಳಿಯಲ್ಲಿ ನಡೆದ ಬಾಲಕಿ ಆತ್ಯಾಚಾರ ಹಾಗೂ ಕೊಲೆಯಂತಹ ಘಟನೆಗಳು ಜರುಗದಂತೆ ಶೌಚಾಲಯ, ಪಡಿತರ ಮುಂತಾದ ವ್ಯವಸ್ಥೆ ಜನರಿಗೆ ತಲುಪುವಂತೆ ಮಾಡಬೇಕು’ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಲಾಕ್ಷಮ್ಮ, ‘ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡುತ್ತೇವೆ’ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್, ಮಂಡಲ ಅಧ್ಯಕ್ಷ ಶೈಲೇಶ್ ಕುಮಾರ್ ಮಾತನಾಡಿದರು.ನಿರ್ಮಲಾ ಮಂಜುನಾಥ್ ನಿರೂಪಿಸಿದರು. ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಅಧ್ಯಕ್ಷತೆ ವಹಿಸಿದ್ದರು.

ಭುವನಾ, ಮಂಡಲ ಪ್ರಧಾನ ಕಾರ್ಯದರ್ಶಿ ವೀರೇಶ್, ಶಕ್ತಿ ಕೇಂದ್ರದ ಅಧ್ಯಕ್ಷ ಎ.ಇ.ಚಂದ್ರಶೇಖರ್, ರೇಖಾಪ್ರಭು, ನಂದಾ, ಕರಿಯಮ್ಮ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.