
ನಾಯಕನಹಟ್ಟಿ: ಸರ್ಕಾರದ ಯೋಜನೆಗಳನ್ನು ಗ್ರಾಮ ಪಂಚಾಯಿತಿಗಳ ಮೂಲಕ ಬಡಜನರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ನಡೆದುಕೊಳ್ಳಬೇಕು ಎಂದು ರಾಜ್ಯ ದ್ರಾಕ್ಷರಸ ಮಂಡಳಿ ಅಧ್ಯಕ್ಷ ಬಿ. ಯೋಗೇಶ್‌ಬಾಬು ಹೇಳಿದರು.
ತಳಕು ಗ್ರಾಮದಲ್ಲಿ ₹ 28 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಭಾರತ್ ನಿರ್ಮಾಣ ರಾಜೀವ್‌ಗಾಂಧಿ ಸೇವಾ ಕೇಂದ್ರ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ತಳಕು ಗ್ರಾಮಕ್ಕೆ ನಿತ್ಯ ನೂರಾರು ರೈತರು, ಸಾರ್ವಜನಿಕರು, ವಿದ್ಯಾರ್ಥಿಗಳು ಭೇಟಿ ನೀಡುತ್ತಾರೆ. ಹಾಗಾಗಿ ತಳಕು ಗ್ರಾಮದ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಕ್ಕೆ ಆದ್ಯತೆ ನೀಡಬೇಕು. ಜೊತೆಗೆ ಈ ಭಾಗದಲ್ಲಿ ಪರಿಶಿಷ್ಟಜಾತಿ ಮತ್ತು ವರ್ಗದ ಜನರೇ ಹೆಚ್ಚಿದ್ದು, ಅವರಿಗೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಸೂಚಿಸಿದರು.
ದೇಶದಲ್ಲಿ ಗ್ರಾಮಗಳ ಉದ್ಧಾರ, ಬಡತನ ನಿರ್ಮೂಲನೆಯೇ ಗಾಂಧಿಜಿಯವರ ಕನಸು. ಹಾಗಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ಎಲ್ಲ ಗ್ರಾಮ ಪಂಚಾಯಿತಿಗಳನ್ನು ಮುಂದಿನ ದಿನಗಳಲ್ಲಿ ಗಾಂಧಿ ಗ್ರಾಮ ಎಂದು ನಾಮಕರಣ ಮಾಡಲು ವಿದೇಯಕ ಮಂಡಿಸಿದ್ದಾರೆ. ಹಾಗಾಗಿ ಪ್ರತಿಯೊಬ್ಬರೂ ಗ್ರಾ.ಪಂ. ಹಂತದಲ್ಲಿ ಪಕ್ಷಭೇದ ಮರೆತು ಹಳ್ಳಿಗಳ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು.
ಗ್ರಾ.ಪಂ. ಅಧ್ಯಕ್ಷೆ ಟಿ. ದ್ರಾಕ್ಷಾಯಿಣಿ ಮಲ್ಲೇಶ್, ಉಪಾಧ್ಯಕ್ಷೆ ಉಮಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ. ತಾ.ಪಂ.ಇಒ ಎಚ್.ಶಶಿಧರ್, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.