ADVERTISEMENT

ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಗದ್ದಲ

ಹೋರಾಟದಲ್ಲಿ ಮೃತರಾದ ರೈತರಿಗೆ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 8:53 IST
Last Updated 18 ಫೆಬ್ರುವರಿ 2021, 8:53 IST
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ   

ಚಿತ್ರದುರ್ಗ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಮೃತರಾದ ರೈತರಿಗೆ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆ ಆರಂಭ ಆಗುತ್ತಿದ್ದಂತೆ ಎದ್ದುನಿಂತ ಕಾಂಗ್ರೆಸ್ ಸದಸ್ಯ ಕೃಷ್ಣಮೂರ್ತಿ ಅವರು ಶ್ರದ್ಧಾಂಜಲಿ ಸಲ್ಲಿಸುವ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿ ಸದಸ್ಯ ಅಜ್ಜಪ್ಪ ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರದಲ್ಲಿ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಗದ್ದಲ ಉಂಟಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, 'ರೈತರು ದೇಶದ ಬೆನ್ನೆಲುಬು. ಕೃಷಿ ಕ್ಷೇತ್ರ ಆತಂಕ ಎದುರಿಸುತ್ತಿದೆ. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರನ್ನು ಗೌರವಿಸೋಣ. ಇದರಲ್ಲಿ ರಾಜಕೀಯ ಮಾಡಬಾರದು' ಎಂದು ಮನವಿ ಮಾಡಿದರು.

ADVERTISEMENT

'ರೈತರ ಬಗ್ಗೆ ಗೌರವ ಹಾಗೂ ಕಾಳಜಿ ಇರುವವರು ಶ್ರದ್ಧಾಂಜಲಿ ಸಲ್ಲಿಸಿ. ರೈತರ ಬಗ್ಗೆ ಕಾಳಜಿ ಇಲ್ಲದವರು ಕುಳಿತುಕೊಳ್ಳಿ' ಎಂದು ಕಾಂಗ್ರೆಸ್ ಸದಸ್ಯ ಪ್ರಕಾಶಮೂರ್ತಿ ಹೇಳಿದರು. ಬಳಿಕ ಎಲ್ಲರೂ ಎದ್ದುನಿಂತು ಶ್ರದ್ಧಾಂಜಲಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.