ADVERTISEMENT

ಪ್ರಸನ್ನಾನಂದಪುರಿ ಸ್ವಾಮೀಜಿ ಪರ ಜಿಲ್ಲಾ ಪಂಚಾಯಿತಿ ನಿರ್ಣಯ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2020, 13:04 IST
Last Updated 29 ಫೆಬ್ರುವರಿ 2020, 13:04 IST
ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ
ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ   

ಚಿತ್ರದುರ್ಗ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ ಟ್ರಸ್ಟ್‌ಗೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಸದಸ್ಯರನ್ನಾಗಿ ನೇಮಿಸುವಂತೆ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಶನಿವಾರ ನಿರ್ಣಯ ಕೈಗೊಂಡಿತು.

ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಡಾವಳಿ ಮಂಡಿಸಿದ ಕಾಂಗ್ರೆಸ್‌ ಸದಸ್ಯ ಕೃಷ್ಣಮೂರ್ತಿ, ‘ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನೇಮಕ ಮಾಡಲಾಗಿದೆ. ಶ್ರೀರಾಮನ ಬಗ್ಗೆ ಈ ಸ್ವಾಮೀಜಿಗೆ ಏನೂ ಗೊತ್ತಿಲ್ಲ. ಜಗತ್ತಿಗೆ ಶ್ರೀರಾಮನನ್ನು ಪರಿಚಯಿಸಿದ ವಾಲ್ಮೀಕಿ ಗುರುಪೀಠದ ಸ್ವಾಮೀಜಿಯನ್ನು ನೇಮಕ ಮಾಡುವುದು ಸೂಕ್ತ’ ಎಂದರು. ಇದಕ್ಕೆ ಸದಸ್ಯರು ಮೇಜು ಕುಟ್ಟಿ ಒಪ್ಪಿಗೆ ಸೂಚಿಸಿದ ಬಳಿಕ ಅನುಮೋದನೆ ಸಿಕ್ಕಿತು.

‘ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಆರ್ಥಿಕ ಮತ್ತು ಸಾಮಾಜಿಕ ಗಣತಿ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬೇಕು’ ಎಂಬ ನಡಾವಳಿವಯನ್ನು ಸಭೆ ಅನುಮೋದಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.