ADVERTISEMENT

‘ಸಮೀಕ್ಷೆ ಸಮರ್ಪಕವಾಗಿ ನಡೆಸಿ’

ಕಂದಾಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆ: ಶಾಸಕ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 16:40 IST
Last Updated 21 ಅಕ್ಟೋಬರ್ 2020, 16:40 IST
ರಬಕವಿ ಬನಹಟ್ಟಿ ನಗರಸಭೆಯ ಸಭಾ ಭವನದಲ್ಲಿ ನಡೆದ ಕಂದಾಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿದರು
ರಬಕವಿ ಬನಹಟ್ಟಿ ನಗರಸಭೆಯ ಸಭಾ ಭವನದಲ್ಲಿ ನಡೆದ ಕಂದಾಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿದರು   

ರಬಕವಿ ಬನಹಟ್ಟಿ: ಈ ಬಾರಿ ಕ್ಷೇತ್ರದಲ್ಲಿ ಅತಿವೃಷ್ಟಿ ಉಂಟಾಗಿದ್ದು, ಹಾನಿಗೊಳಗಾದ ಮನೆ, ರಸ್ತೆಗಳ ಸಮೀಕ್ಷೆಯನ್ನು ಸಮಪರ್ಕವಾಗಿ ಕೈಗೊಳ್ಳಿ ಎಂದು ಶಾಸಕ ಸಿದ್ದು ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಸ್ಥಳೀಯ ನಗರಸಭೆಯ ಸಭಾ ಭವನದಲ್ಲಿ ಕಂದಾಯ ಮತ್ತ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಭಾರಿ ಮಳೆಯಿಂದಾಗಿ ಕ್ಷೇತ್ರದಲ್ಲಿ ವಿವಿಧ ಇಲಾಖೆಗಳಿಂದ ನಿರ್ಮಾಣವಾದ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಆದ್ದರಿಂದ ಆಯಾ ಇಲಾಖೆಯ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿಯನ್ನು ನೀಡಬೇಕು. ಅದೇ ರೀತಿಯಾಗಿ ಸಾಕಷ್ಟ ಮನೆಗಳು ಬಿದ್ದಿವೆ. ಕ್ಷೇತ್ರದಲ್ಲಿ ಬಡವರ ಮನೆಗಳು ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಸಮಗ್ರ ವರದಿಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಬೇಕು. ಈ ವಿಷಯದಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದರು.

ADVERTISEMENT

ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಶಾಂತ ಚನಗೊಂಡ ಮಾತನಾಡಿ, ಒಟ್ಟು ಮೂರು ಹಂತಗಳಲ್ಲಿ ಸಮೀಕ್ಷೆ ಮಾಡಲಾಗುವುದು. ತಾಲ್ಲೂಕು ವ್ಯಾಪ್ತಿಯಲ್ಲಿ ಬಿದ್ದ ಮನೆಗಳ ಪಟ್ಟಿಯನ್ನು ಆಯಾ ನಗರಸಭೆ, ಪುರಸಭೆ ಮತ್ತು ಪಂಚಾಯ್ತಿಗಳಲ್ಲಿ ಪ್ರಕಟಿಸಲಾಗುವುದು. ಈ ಬಾರಿಯ ಸಮೀಕ್ಷೆಯಲ್ಲಿ ಯಾವುದೆ ರೀತಿಯ ಗೊಂದಲಗಳು ಆಗದಂತೆ, ದೂರುಗಳು ಬರದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಈಗಾಗಲೇ ಶೇ.90 ರಷ್ಟು ಸಮೀಕ್ಷೆ ‌ಕಾರ್ಯ ಮುಗಿದಿದ್ದು, ಇನ್ನೂ ನಾಲ್ಕೈದು ಗ್ರಾಮಗಳ ಸಮೀಕ್ಷೆ ಜಾರಿಯಲ್ಲಿದೆ ಎಂದು ತಹಶೀಲ್ದಾರ್‍ ತಿಳಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಸಂಜೀವಕುಮಾರ ಹಿಪ್ಪರಗಿ, ಉಪ ತಹಶೀಲ್ದಾರ್‍ ಬಸವರಾಜ ಬಿಜ್ಜರಗಿ, ಎಸ್‍.ಎಲ್‍.ಕಾಗಿಯವರ, ವೃತ್ತ ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.