ADVERTISEMENT

ಕೋವಿಡ್‌: ನಾಲ್ಕು ಜಿಲ್ಲೆಗಳಲ್ಲಿ ಪತ್ತೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2022, 4:32 IST
Last Updated 25 ಏಪ್ರಿಲ್ 2022, 4:32 IST

ಬೆಂಗಳೂರು: ರಾಜ್ಯದಲ್ಲಿ ಭಾನುವಾರ 60 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣವು ಶೇ 0.72ರಷ್ಟಿದೆ.

ಬೆಂಗಳೂರು ನಗರದಲ್ಲಿ ಅತಿ ಹೆಚ್ಚಿನ 57 ಪ್ರಕರಣಗಳು ವರದಿಯಾಗಿವೆ. ಚಿತ್ರದುರ್ಗ, ಧಾರವಾಡ, ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ. ಈವರೆಗೆ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 39.46 ಲಕ್ಷಕ್ಕೆ ಏರಿಕೆಯಾಗಿದೆ.

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1,676ಕ್ಕೆ ಇಳಿಕೆಯಾಗಿದೆ. ಶನಿವಾರ 1,679 ಸಕ್ರಿಯ ಪ್ರಕರಣಗಳಿದ್ದವು. ಒಂದು ದಿನದ ಅವಧಿಯಲ್ಲಿ 8,263 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.

ADVERTISEMENT

ಸೋಂಕಿತರ ಪೈಕಿ ಬೆಂಗಳೂರಿನಲ್ಲಿ 52 ಮಂದಿ ಸೇರಿದಂತೆ ರಾಜ್ಯದಲ್ಲಿ 63 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 39.05 ಲಕ್ಷಕ್ಕೆ ತಲುಪಿದೆ.

ಏ.18 ರಿಂದ 24ರವರೆಗೆ ಕೋವಿಡ್‌–19ನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.