ಬೆಂಗಳೂರು: ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ಅಮಿತ್ಕುಮಾರ್ (32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ಭಾರತ–ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ಆರೋಪಿ ಬೆಟ್ಟಿಂಗ್ ನಡೆಸುತ್ತಿದ್ದ. ಆತನಿಂದ ₹ 1.36 ಲಕ್ಷ ನಗದು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
‘ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಆರೋಪಿ ಎರಡೂ ತಂಡಗಳ ಗೆಲುವು ಹಾಗೂ ಸೋಲಿನ ಲೆಕ್ಕಾಚಾರದಲ್ಲಿ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ಆ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಲಾಯಿತು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.